ಜಪಾನ್ ಸುಝುಕಿ ಸಂಸ್ಥೆ ಸಿಇಒ ತೋಷಿಯಿರೋ ಅವರ ನೇತೃತ್ವದ ನಿಯೋಗದಲ್ಲಿ 30 ಮಂದಿ ಜಪಾನ್ ತಂಡ ಆಗಮಿಸಿ ಆರೋಗ್ಯ ವ್ಯವಸ್ಥೆಯನ್ನು ಪರಿಶೀಲಿಸಿತು. ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಯೊಂದಿಗೆ ಸಂವಾದ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕೆ.ಶೆಟ್ಟಹಳ್ಳಿಗೆ ಜಪಾನ್ ಕಂಪನಿಗಳ ನಿಯೋಗ ಆಗಮಿಸಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಫ್ರೌಢಶಾಲೆಗಳಿಗೆ ಭೇಟಿ ನೀಡಿ ಇಲ್ಲಿನ ಮಾಹಿತಿ ಪಡೆದು ಮೆಚ್ವುಗೆ ವ್ಯಕ್ತಪಡಿಸಿದೆ.ಜಪಾನ್ ಸುಝುಕಿ ಸಂಸ್ಥೆ ಸಿಇಒ ತೋಷಿಯಿರೋ ಅವರ ನೇತೃತ್ವದ ನಿಯೋಗದಲ್ಲಿ 30 ಮಂದಿ ಜಪಾನ್ ತಂಡ ಆಗಮಿಸಿ ಆರೋಗ್ಯ ವ್ಯವಸ್ಥೆಯನ್ನು ಪರಿಶೀಲಿಸಿತು. ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ನಂತರ ಗ್ರಾಮದ ಇಲ್ಲಿನ ಆರೋಗ್ಯ ಇಲಾಖೆಯಿಂದ ಆಸ್ಪತ್ರೆಯಲ್ಲಿ ನಡೆದಿರುವ ಕಾರ್ಯಕ್ರಮಗಳು, ಅನುಷ್ಠಾನಗೊಂಡಿರುವ ಬಗ್ಗೆ ಮಾಹಿತಿ ಪಡೆದರು. ಗ್ರಾಮ ಜಪಾನ್ ದೇಶದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿ ಈ ಭೇಟಿಗೆ ಕಾರಣವಾಗಿದೆ. ಸಾವರ್ಜನಿಕವಾಗಿ ನೀಡುವ ವಿವಿಧ ಲಸಿಕ ವ್ಯವಸ್ಥೆಯಲ್ಲೂ ಹೈಟೆಕ್ ಟಬ್ ನೀಡಿರುವುದು, ಮಣಿಪಾಲ್ ಸಂಸ್ಥೆಯಿಂದ ಮೊಬೈಲ್ ವ್ಯಾಕ್ಷಿಲೇಕ್ಷನ್ ಯೂನಿಟ್, ಬರೋಬರಿ 78 ಗಂಟೆಗಳ ಚಾರ್ಜ್ ಜೊತೆಗೆ ಸೋಲಾರ್ ಮೂಲಕ ಮರು ಚಾರ್ಜ್ ಮಾಡುವ ಸೌಲಭ್ಯವನ್ನು ಹೊಂದಿದೆ.ಕೆ.ಶೆಟ್ಟಹಳ್ಳಿ ಒಂದು ಗ್ರಾಮ ಒಂದು ಆರೋಗ್ಯ ಕೇಂದ್ರ ಇದು ಜಪಾನ್ ದೇಶವನ್ನು ಗಮನ ಸೆಳೆಯಲು ಕಾರಣ ಎನ್ನಲಾಗಿದೆ. ನಂತರ ಸರ್ಕಾರಿ ಫ್ರೌಢ ಶಾಲೆಗೆ ಭೇಟಿ ನೀಡಿ ಎಚ್‌ಪಿವಿ ಲಸಿಕ ಅಭಿಯಾನದ ಜಾಗೃತಿಯಲ್ಲಿ ಭಾಗಿಯಾದರು.
ನಿಯೋಗವನ್ನು ಕೆ.ಶೆಟ್ಟಹಳ್ಳಿ ಗ್ರಾಪಂ ಪಿಡಿಒ ಡಾ. ಶೋಭಾರಾಣಿ ಹಾಗೂ ಆಸ್ಪತ್ರೆ ವೈದ್ಯ ಸಿಬ್ಬಂದಿ ಸ್ವಾಗತಿಸಿ ಬರಮಾಡಿಕೊಂಡರು.ಕ್ರೀಡೆ ದೈಹಿಕ-ಮಾನಸಿಕ ಸದೃಢತೆಗೆ ಅಗತ್ಯ: ತಗ್ಗಹಳ್ಳಿ ವೆಂಕಟೇಶ್ಕನ್ನಡಪ್ರಭ ವಾರ್ತೆ ಮಂಡ್ಯಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಚಟುವಟಿಕೆ ಹಾಗೂ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಲಾಯಿತು.ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾತನಾಡಿ, ದೇಶ ಕಂಡ ಅಪ್ರತಿಮ ಕ್ರೀಡಾಪಟು ಹಾಗೂ ಹಾಕಿ ಕ್ಷೇತ್ರದ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಅವರ ಸ್ಮರಣಾರ್ಥ ಕೇಂದ್ರ ಸರ್ಕಾರದ ಆಶಯದಂತೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಕ್ರೀಡೆ ಮಹತ್ವವನ್ನು ಜನಸಾಮಾನ್ಯರಿಗೆ, ಅದರಲ್ಲೂ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ತಿಳಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸದೃಢತೆಯೂ ಹೆಚ್ಚುತ್ತದೆ. ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ. ಕ್ರೀಡೆಯು ಶಿಸ್ತು, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ತಂಡದ ಮನೋಭಾವ ಬೆಳೆಸುವುದರ ಜೊತೆಗೆ ಆರೋಗ್ಯಕರ ಜೀವನಕ್ಕೆ ಸಹಕಾರಿಯಾಗಿದೆ ಎಂದರು.
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶ ಹಾಗೂ ನಾಡಿಗೆ ಕೀರ್ತಿ ತಂದ ಅನೇಕ ಕ್ರೀಡಾಪಟುಗಳು ನಮ್ಮಲ್ಲಿದ್ದಾರೆ. ಅವರ ಸಾಧನೆಗಳು ಯುವಜನರಿಗೆ ಸ್ಫೂರ್ತಿಯಾಗಬೇಕು. ವಿದ್ಯಾರ್ಥಿಗಳು ಹಾಗೂ ಯುವಜನರು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಉತ್ತಮ ತರಬೇತಿ ಪಡೆದು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಗೌರವ ತರಬೇಕು ಎಂದು ಕರೆ ನೀಡಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ ಮಾತನಾಡಿದರು. ಕ್ರೀಡಾಪಟುಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಬಳಿಕ ಮ್ಯಾರಥಾನ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆಯ ತರಬೇತಿದಾರ ಸೋಮಶೇಖರ್, ಡಿಡಿಪಿಐ ಕಚೇರಿ ದೈಹಿಕ ಶಿಕ್ಷಣ ಪರೀಕ್ಷಕ ಹೂವಯ್ಯ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ ಸೇರಿದಂತೆ ಕ್ರೀಡಾಪಟುಗಳು, ಕ್ರೀಡಾ ಪ್ರೇಮಿಗಳು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.