ಸಾರಾಂಶ
ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿ ಪಕ್ಷವನ್ನು ಗೆಲ್ಲಿಸಿದ್ದಾರೆ. ಬಿಜೆಪಿಯದು ಕೇವಲ ಘೋಷಣೆ, ಭರವಸೆಗಳನ್ನು ನೀಡುವ ಆಡಳಿತವಲ್ಲ. ಅಭಿವೃದ್ಧಿಯತ್ತ ಜನರನ್ನು, ದೇಶವನ್ನು ಕೊಂಡೊಯ್ಯುತ್ತದೆ ಎನ್ನವುದಕ್ಕೆ ಈ ಚುನಾವಣೆಯಲ್ಲಿ ಸಿಕ್ಕಿರುವ ಗೆಲುವೇ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.
ದಿಲ್ಲಿ ಅಸೆಂಬ್ಲೀಲಿ ಬಹುಮತ । ಜಿಲ್ಲಾ ಬಿಜೆಪಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿ ಪಕ್ಷವನ್ನು ಗೆಲ್ಲಿಸಿದ್ದಾರೆ. ಬಿಜೆಪಿಯದು ಕೇವಲ ಘೋಷಣೆ, ಭರವಸೆಗಳನ್ನು ನೀಡುವ ಆಡಳಿತವಲ್ಲ. ಅಭಿವೃದ್ಧಿಯತ್ತ ಜನರನ್ನು, ದೇಶವನ್ನು ಕೊಂಡೊಯ್ಯುತ್ತದೆ ಎನ್ನವುದಕ್ಕೆ ಈ ಚುನಾವಣೆಯಲ್ಲಿ ಸಿಕ್ಕಿರುವ ಗೆಲುವೇ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.
ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತ ಜಿಲ್ಲಾ ಬಿಜೆಪಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ ನಂತರ ಅವರು ಮಾತನಾಡಿದರು.ಕಳೆದ 27 ವರ್ಷಗಳ ಬಳಿಕೆ ದೆಹಲಿಯಲ್ಲಿ ಬಿಜೆಪಿ ಗೆದ್ದಿದೆ. ಹತ್ತು ವರ್ಷಗಳಿಂದ ಅಧಿಕಾರ ನಡೆಸಿದ ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಕೈಯಲ್ಲಿ ಪೊರಕೆ ಹಿಡಿದು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದಾಗಿ ಹೇಳಿ ಕೊನೆಗೆ ಜೈಲಿಗೆ ಹೋಗಿ ಬಂದರು ಎಂದರು.
ಜಿಲ್ಲಾ ಬಿಜೆಪಿ ಖಜಾಂಚಿ ಮಾಧುರಿ ಗಿರೀಶ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ನವೀನ್ ಚಾಲುಕ್ಯ, ತಿಪ್ಪೇಸ್ವಾಮಿ, ಕಿರಣ್, ಶಂಭು, ಬಸಮ್ಮ, ಶಾಂತಮ್ಮ, ವೀರೇಶ್, ಮಹಾಂತೇಶ್, ಯುವ ಮೋರ್ಚಾ ಮಾಜಿ ಅಧ್ಯಕ್ಷ ವಿರುಪಾಕ್ಷ ಮುಂತಾದವರು ಪಾಲ್ಗೊಂಡಿದ್ದರು.