ಸಾರಾಂಶ
ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಹಾವೇರಿ: ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಜಿಲ್ಲೆಯ ಎಲ್ಲಾ ಬಿಜೆಪಿ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಬಿಜೆಪಿ ಕಾರ್ಯಕರ್ತರ ಪರವಾಗಿ ಅಭಿನಂದನಗೆಳನ್ನು ತಿಳಿಸಿದರು.ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ವೆಂಕಟೇಶ ನಾರಾಯಣಿ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ನಾಗೇಂದ್ರ ಕಡಕೋಳ, ಬಸವರಾಜ ಹಾಲಪ್ಪನವರ, ಲಲಿತಾ ಗುಂಡೇನಹಳ್ಳಿ, ವಿಜಯಕುಮಾರ ಕುಡ್ಲಪ್ಪನವರ, ಜಗದೀಶ ಕನವಳ್ಳಿ, ಶಿವಯೋಗಿ ಹುಲಿಕಂತಿಮಠ, ಅಭಿಷೇಕ ಗುಡಗೂರ, ಮಂಜುನಾಥ ಮಲಗೋಡ, ರಜಾಕ ನೆಗಳೂರ, ಶಂಭುಲಿಂಗ ಹತ್ತಿ, ವೆಂಕಟೇಶ ಇಟಗಿ, ಮಂಜುನಾಥ ತಾಂಡೂರ, ಮಂಜುನಾಥ ಮಡಿವಾಳರ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.