ಸರ್ಕಾರದ ಎಲ್ಲ ಯೋಜನೆಗಳು ಬಡವರಿಗೆ ತಲುಪಿಸಿ

| Published : Apr 28 2025, 12:45 AM IST

ಸರ್ಕಾರದ ಎಲ್ಲ ಯೋಜನೆಗಳು ಬಡವರಿಗೆ ತಲುಪಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕಾರಿಪುರ: ಬಡವರಿಗೆ ಸರ್ಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಎಚ್ಚರಿಸಿದರು.

ಶಿಕಾರಿಪುರ: ಬಡವರಿಗೆ ಸರ್ಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಎಚ್ಚರಿಸಿದರು.

ಪಟ್ಟಣದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಡಿತರ ಅಕ್ಕಿ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳು ಬಡವರಿಗೆ ನೇರವಾಗಿ ಸೂಕ್ತ ಕಾಲದಲ್ಲಿ ತಲುಪಬೇಕು, ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಫಲಾನುಭವಿಗಳಿಗೆ ತಲುಪಿಸಿ, ಇಲ್ಲವಾದಲ್ಲಿ ಸರ್ಕಾರ ಯೋಜನೆ ಜಾರಿಗೊಳಿಸಿರುವುದು ನಿರರ್ಥಕವಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ತಮ್ಮ ಇಲಾಖೆ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ಸಲಹೆ ನೀಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವ ರೀತಿ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದರು.ಸರ್ಕಾರ ಪ್ರತಿ ಬಡವರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ವಿವಿಧ ಸಮಿತಿಗಳನ್ನು ರಚಿಸಿದ್ದು, ಈ ದಿಸೆಯಲ್ಲಿ ನಾವು ಕೇವಲ ಅದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದೇವೆ. ಸಂಪೂರ್ಣ ಹೊಣೆ ಅಧಿಕಾರಿಗಳಿದ್ದೇ ಆಗಿರುತ್ತದೆ. ಬಡವರಿಗೆ ನೀಡುವ ಅಕ್ಕಿಯಲ್ಲಿ ತೂಕ ವಂಚನೆ ಆಗುತ್ತಿದ್ದು, ಈ ಬಗ್ಗೆ ಸಾಕಷ್ಟು ದೂರಗಳು ಬಂದಿವೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೇಸಿಗೆ ಕಾಲವಾದ್ದರಿಂದ ವಿದ್ಯುತ್ ಸಮಸ್ಯೆಗಳು ತಲೆದೋರುವುದು ಸಹಜ. ಸಂಬಂಧಪಟ್ಟವರು ಎಲ್ಲೂ ಅಡೆತಡೆ ಆಗದಂತೆ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದ ಅವರು, ಕುಡಿಯುವ ನೀರು, ವಿದ್ಯುತ್, ಆಹಾರ ಸರಬರಾಜು, ರೈತರಿಗೆ ಬೀಜ ಗೊಬ್ಬರ ಸೇರಿದಂತೆ ಯಾವುದೇ ತೊಂದರೆಗಳಾಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ತಾಕೀತು ಮಾಡಿದರು.

ಸಭೆಯಲ್ಲಿ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ದೇನ್ಯಾ ನಾಯಕ್, ಆಹಾರ ಇಲಾಖೆಯ ಅರ್ಶಿಯಾ ತಂಝಿಮ್, ಕೆಪಿಟಿಸಿಎಲ್ ಎಇಇ ಶ್ರೀಧರ್, ತಾಪಂ ವ್ಯವಸ್ಥಾಪಕರಾದ ಶಿಲ್ಪ, ಗ್ಯಾರಂಟಿ ಸಮಿತಿಯ ಸದಸ್ಯರಾದ ತೇಜ ನಾಯಕ್‌, ಶಿವು ಹುಲ್ಮಾರ್, ಲೋಕೇಶ್ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.