ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಅಮೃತರಾವ್‌ ಚಿಮಕೋಡೆ

| Published : Sep 05 2025, 01:00 AM IST

ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಅಮೃತರಾವ್‌ ಚಿಮಕೋಡೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್‌ ಚಿಮಕೋಡೆ ಅವರು ಸೂಚಿಸಿದರು.

ಕನ್ನಡಪ್ರಭ ವಾರ್ತೆ, ಬೀದರ್‌

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್‌ ಚಿಮಕೋಡೆ ಅವರು ಸೂಚಿಸಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ-381970 ಇವರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಆಗಸ್ಟ್ ಅಂತ್ಯಕ್ಕೆ 355246 ಫಲನುಭವಿಗಳು ನೊಂದಾಣಿಯಾಗಿರುತ್ತಾರೆ ಮತ್ತು ಮಾಹೆಗೆ 2000 ರು. ಅಂತೆ 1340.63 ಕೋಟಿ ಹಣವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ ಹಾಗೂ ಐಟಿ ಜಿಎಸ್‌ಟಿ ಸಮಸ್ಯೆ ನಿವಾರಣೆ ಆದವರು ಮತ್ತೆ ಅರ್ಜಿ ಸಲ್ಲಿಸಲು ತಿಳಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿಯಲ್ಲಿ 13,13,305 ಫಲಾನುಭವಿಗಳಿದ್ದು, 333.28 ಕೋಟಿ ರು. ಅನುದಾನ ಬಳಕೆಯಾಗಿದೆ. ಜುಲೈಯಿಂದ ಅಕ್ಕಿ ಜೊತೆಗೆ ಜೋಳ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡಲಾಗುತ್ತದೆ. ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು ಮತ್ತು ಕೆಲವು ಹಳ್ಳಿ ಮತ್ತು ತಾಂಡಗಳಲ್ಲಿ ನ್ಯಾಯ ಬೆಲೆ ಅಂಗಡಿ ಅಂಗಡಿ ಆರಂಭಿಸಿ, ಆಹಾರ ಧಾನ್ಯ ನೀಡಬೇಕು ಹಾಗೂ ಹೆಬ್ಬೆಟ್ಟಿನ ಗುರುತು ತೆಗೆದುಕೊಂಡ ಕೂಡಲೇ ರೇಷನ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 11825 ನೊಂದಣಿಯಾಗಿದ್ದು ಅದರಲ್ಲಿ 7853 ಪದವಿ ಅಭ್ಯರ್ಥಿಗಳು ಮತ್ತು 172 ಡಿಪ್ಲೋಮಾ ಅಭ್ಯರ್ಥಿಗಳು ಫಲಾನುಭವಿಗಳಿಗೆ ₹23.29 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ. ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 3,68,667 ಫಲಾನುಭವಿಗಳಿದ್ದು 376.93 ಕೋಟಿ ಹಣ ಬಳಕೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 11-06-2023 ರಿಂದ 27-08-2025 ರವರಿಗೆ ಮಹಿಳಾ ಮತ್ತು ಬಾಲಕಿಯರು ಒಟ್ಟು ಸೇರಿ ₹9.25ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಎಂದರು.

ಕೆಲವು ಕಡೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ನಿಲ್ಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದು, ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರ ಸಲ್ಲಿಸಿ, ಒಂದು ವೇಳೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು ಎಂದು ಚಿಮಕೋಡೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.