ಸಾರಾಂಶ
ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ಬಿಜಪಿ ಪಕ್ಷದ ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)ಗಳ ತರಬೇತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಪುತ್ತೂರು
ಬೂತ್ ಏಜೆಂಟ್‌ಗಳು ತಾವು ತರಬೇತಿಯಲ್ಲಿ ಕಲಿತುಕೊಂಡದ್ದನ್ನು ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಗೆ ತಿಳಿಸುವ ಕೆಲಸ ಮಾಡಬೇಕು. ಸರ್ಕಾರದ ಯೋಜನೆ ತಳ ಮಟ್ಟದಲ್ಲಿ ಮನೆ ಮನೆಗಳಿಗೆ ಮುಟ್ಟಿಸುವ ಕೆಲಸ ಕಾರ್ಯಕರ್ತರಿಂದಾಗಬೇಕು. ಗ್ಯಾರಂಟಿಯ ಉಪಯೋಗದ ಬಗ್ಗೆ ತಳ ಮಟ್ಟಕ್ಕೆ ತಿಳಿಸುವ ಕೆಲಸ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದರು. ಅವರು ಪುತ್ತೂರು, ವಿಟ್ಲ ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ಭಾನುವಾರ ನಡೆದ ಪಕ್ಷದ ಬೂತ್ ಮಟ್ಟದ ಏಜೆಂಟ್(ಬಿಎಲ್‌ಎ)ಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವ, ಪದ್ಮನಾಭ ಪೂಜಾರಿ, ಯು ಟಿ ತೌಸೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಬ್ಲಾಕ್ ಮಾಜಿ ಅಧ್ಯಕ್ಷ ಎಂ ಬಿ ವಿಶ್ವನಾಥ, ಪ್ರಸಾದ್ ಕೌಶಲ್ ಶೆಟ್ಟಿ, ಉಷಾ ಅಂಚನ್, ಅನಿತಾ ಹೇಮನಾಥ ಶೆಟ್ಟಿ, ಚಂದ್ರಪ್ರಭಾ, ಮನೋರಾಜ್ ರಾಜೀವ್, ಪ್ರವೀಣ್ ಚಂದ್ರ ಆಳ್ವ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ ವಂದಿಸಿದರು. ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ನಿರೂಪಿಸಿದರು