ಸಾರಾಂಶ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ ಯಲಬುರ್ಗಾಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಇರುವ ಸರ್ಕಾರದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತಂದು ಅರ್ಹ ಫಲಾನುಭವಿಗಳಿಗೆ ಅನುದಾನ ತಲುಪಿಸಬೇಕು ಎಂದು ತಾಪಂ ಇಒ ಸಂತೋಷ ಬಿರಾದಾರ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಜಾರಿಗೊಂಡ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಫಲಾನುಭವಿಗಳ ಹಿತ ಕಾಪಾಡುವ ಪ್ರಾಮಾಣಿಕ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದರು.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿಧರ ಸಕ್ರಿ ಮಾತನಾಡಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಇವುಗಳನ್ನು ನಮ್ಮ ಇಲಾಖೆಯಿಂದ ಕೊಡಲಾಗುತ್ತದೆ. ನಾನಾ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಅಗತ್ಯನುಗುಣವಾಗಿ ಬಳಸಿಕೊಂಡು ಜನರಿಗೆ ಸಕಾಲಕ್ಕೆ ದೊರೆಯುವಂತೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ದುರಪಯೋಗವಾಗದಂತೆ ಎಚ್ಚರಿಕೆ ವಹಿಸಿ ಇನ್ನೂ ಮೂರ‍್ನಾಲ್ಕು ತಿಂಗಳೊಳಗಾಗಿ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
ನಾನಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸಭೆಯಲ್ಲಿ ಪಪಂ ಮುಖ್ಯಾಧಿಕಾರಿ ನಾಗೇಶ, ಅಧಿಕಾರಿಗಳಾದ ನಿಂಗನಗೌಡ ಪಾಟೀಲ್, ಬೆಟ್ಟದಪ್ಪ ಮಾಳೆಕೊಪ್ಪ, ಮಹ್ಮದ್ ಮುಸ್ತಾಫ್, ಶ್ರೀಧರ ತಳವಾರ, ರಮೇಶ ಚಿಣಗಿ, ವೀರಭದ್ರಪ್ಪ, ಎಚ್.ಡಿ. ಪ್ರೇಮಾ, ಮಾಧವಿ ವೈದ್ಯ, ಅಂದಪ್ಪ ಕುರಿ, ವಿಜಯಕುಮಾರ ಸೇರಿದಂತೆ ಮತ್ತಿತರರು ಇದ್ದರು.