ಸಾರಾಂಶ
- ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದ ಪಿಎಂ ವಿಶ್ವಕರ್ಮ ಯೋಜನೆ ಕರಪತ್ರ ಬಿಡುಗಡೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿಎಂ ವಿಶ್ವಕರ್ಮ ಯೋಜನೆ ಕರಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಮಾತನಾಡಿದರು. ಸರ್ಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಜೊತೆಗೆ ಅವರಿಗೆ ಆರ್ಥಿಕ ಸೌಲಭ್ಯ ಕಲ್ಪಿಸಿ ಸ್ವಾವಲಂಬಿ ಜೀವನ ನಡೆಸುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದರು.ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕುಶಲ ಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮತ್ತು ಆಧಾರ್ ಆಧಾರಿತ, ಬಯೋಮೆಟ್ರಿಕ್, ದೃಢೀಕೃತ ಪಿಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಅವರು, ಸ್ಥಳೀಯ ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾಪಿಸಲಾದ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ಯೋಜನೆಗೆ ನೋಂದಣಿ ಮಾಡಬಹುದು ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದರಾಜು ಮಾತನಾಡಿ, ಸ್ಥಳೀಯ ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಸಾಂಪ್ರದಾಯಿಕವಾಗಿ ಕುಶಲಕರ್ಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕುಟುಂಬದ ಸದಸ್ಯರು, ಸರ್ಕಾರಿ ಸೇವೆಯಲ್ಲಿ ಇಲ್ಲದೇ ಇರುವ ಕುಟುಂಬದ ಏಕಮಾತ್ರ ಸದಸ್ಯರು ಯೋಜನೆಗೆ ಶಿಫಾರಸ್ಸು ಮಾಡಬಹುದಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 209 ಗ್ರಾಪಂ ಅಧ್ಯಕ್ಷರು ಆನ್ ಬೋರ್ಡಿಂಗ್ ಆಗಿದು, ಇನ್ನೂ 17 ಗ್ರಾಮ ಪಂಚಾಯಿತಿ ಅಧ್ಯಕ್ಷರು ಆಗ ಬೇಕಾಗಿದೆ. ಬಡಗಿ/ಮರಗೆಲಸ, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ, ಗಾರೆ ಕೆಲಸ /ಕಲ್ಲು ಕುಟಿಗ, ಬುಟ್ಟಿ, ಚಾಪೆ ಕಸಪೊರಕೆ ತಯಾರಕರು ಸೇರಿದಂತೆ ಇತರರು ಈ ಯೋಜನೆಯಡಿ ಲಾಭ ಪಡೆಯಬಹುದಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ 4150 ಜನ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲ..
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಗ್ರಾಮೀಣ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಉಮೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ರವಿಪ್ರಸಾದ್, ಸಹಾಯಕ ನಿರ್ದೇಶಕ ಚಂದ್ರ ಶೇಖರ್ ಉಪಸ್ಥಿತರಿದ್ದರು.14 ಕೆಸಿಕೆಎಂ 2ಜಿಲ್ಲಾ ಕೈಗಾರಿಕಾ ಕೇಂದ್ರ ಹೊರತಂದಿರುವ ಪಿ.ಎಂ. ವಿಶ್ವಕರ್ಮ ಯೋಜನೆ ಕರಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಮೀನಾ ನಾಗರಾಜ್ ಗುರುವಾರ ಬಿಡುಗಡೆ ಮಾಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))