ಕನ್ನಡಪ್ರಭ ವಾರ್ತೆ ಶಿರಾ
ಗ್ರಾಮೀಣ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ. ಗೌಡ ಕರೆ ನೀಡಿದರು.ಅವರು ಶಿರಾ ತಾಲೂಕು ಹುಲಿಕುಂಟೆ ಹೋಬಳಿ ಗೋಪಿಕುಂಟೆ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಶಿರಾ ಗ್ರಾಮಾಂತರ ಮಂಡಲದ ವತಿಯಿಂದ ಏರ್ಪಡಿಸಿದ್ದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾದ ಬರಗೂರು ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಜಿಲ್ಲಾ ಕಾರ್ಯದರ್ಶಿ ಕುಮಾರ್ ಮಾಸ್ಟರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಮತ್ತು ಪುರುಷೋತ್ತಮ್, ಕಾರ್ಯದರ್ಶಿ ಶಾಮಿಯಾನ ಸಿದ್ದಪ್ಪ, ಯುವ ಮೋರ್ಚಾ ಅಧ್ಯಕ್ಷರಾದ ತಡಕಲೂರು ಹರೀಶ್, ಹಿರಿಯ ಮುಖಂಡರಾದ ಸದಾಶಿವಯ್ಯ, ಸಿದ್ದಲಿಂಗಪ್ಪ, ಶ್ರೀಧರ್, ಶಿವಣ್ಣ, ನಾದೂರು ಕುಮಾರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೂಗನಹಳ್ಳಿ ರಾಮು, ಜಗದೀಶ್, ಕೃಷ್ಣಪ್ಪ, ಮೂರ್ತಿ, ಚಿದಾನಂದ್, ನಾಗರಾಜಪ್ಪ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.