ಉನ್ನತ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ರೂಪಿಸಲಾಗಿರುವ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ತಾತ್ವಿಕವಾಗಿ ಬೋಧಿಸಿವುದಲ್ಲದೇ ಪ್ರಾಯೋಗಿಕವಾಗಿ ಕಲಿಯಲು ಹೆಚ್ಚು ಒತ್ತನ್ನು ನೀಡಬೇಕು. ನನ್ನ ವೃತ್ತಿ ನನ್ನ ಆಯ್ಕೆ ಕೌಶಲ್ಯ ತರಬೇತಿ ಕುರಿತು ಪರಿಶೀಲನೆ ನಡೆಸಿ ಯೋಜನೆಯನ್ನು ಇನ್ನು ಹೆಚ್ಚಿನ ವಿದ್ಯಾಸಂಸ್ಥೆಗಳಿಗೆ ವಿಸ್ತರಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ರೂಪಿಸಿರುವ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಲುಪುವಂತಾಗಲು ಅಗತ್ಯ ಪ್ರಚಾರ ಕೈಗೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಮಾಹಿತಿ ತಲುಪಿಸಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಕೌಶಲ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಮಾತನಾಡಿ, ತರಬೇತಿಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಹಾಗೂ ಪ್ರಸಕ್ತ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾದ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡುವಂತೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಿದರು. ಪ್ರಾಯೋಗಿಕ ಕಲಿಕೆಗೆ ಒತ್ತುಉನ್ನತ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ರೂಪಿಸಲಾಗಿರುವ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ತಾತ್ವಿಕವಾಗಿ ಬೋಧಿಸಿವುದಲ್ಲದೇ ಪ್ರಾಯೋಗಿಕವಾಗಿ ಕಲಿಯಲು ಹೆಚ್ಚು ಒತ್ತನ್ನು ನೀಡಬೇಕು. ನನ್ನ ವೃತ್ತಿ ನನ್ನ ಆಯ್ಕೆ ಕೌಶಲ್ಯ ತರಬೇತಿ ಕುರಿತು ಪರಿಶೀಲನೆ ನಡೆಸಿ ಯೋಜನೆಯನ್ನು ಇನ್ನು ಹೆಚ್ಚಿನ ವಿದ್ಯಾಸಂಸ್ಥೆಗಳಿಗೆ ವಿಸ್ತರಿಸಬೇಕು ಎಂದು ತಿಳಿಸಿದರು. ಸಿಡಾಕ್ ಸಂಸ್ಥೆಯ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳಲ್ಲಿ ವೈವಿಧ್ಯಮಯ ವಸ್ತುಗಳ ತಯಾರಿಕೆ ಹಾಗೂ ಪ್ಯಾಕೇಜಿಂಗ್ ಬಗ್ಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಲ್‌ಜಲ್ ಮಿತ್ರ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ತಮ ತರಬೇತಿ ನೀಡಿ ಅವರನ್ನು ನುರಿತ ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸಿ ಗ್ರಾಮೀಣ ಪರಿಸರದಲ್ಲಿ ಉತ್ತಮ ರೀತಿ ಕಾರ್ಯನಿರ್ವಹಿಸುವಂತಾಗಲು ಅಗತ್ಯ ಕ್ರಮ ವಹಿಸಿವಂತೆ ತಿಳಿಸಿದರು.

ಯುವನಿಧಿ, ಯುವನಿಧಿ ಪ್ಲಸ್ಯುವನಿಧಿ ಹಾಗೂ ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲವನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ತಿಳಿಸಿದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ನೀಡಿ ಯೋಜನೆಯ ಪ್ರಯೋಜನ ಗರಿಷ್ಟ ಫಲಾನುಭವಿಗಳಿಗೆ ತಲುಪಲು ಕ್ರಮವಹಿಸುವಂತೆ ತಿಳಿಸಿದರು. ಡೇನಲ್ಮ್ ಯೋಜನೆಯ ಪ್ರಧಾನ ಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸುವಂತೆ ಹಾಗೂ ಪಿ.ಎಂ ಸ್ವನಿಧಿ ಯೋಜನೆಯ ಉಪಯೋಗ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ತಲುಪುವಂತೆ ಹಾಗೂ ವ್ಯಾಪಾರ ವಲಯಗಳನ್ನು ನಗರ ಪ್ರದೇಶಗಳಲ್ಲಿ ನಿರ್ಮಿಸಲು ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು. ಪಿ.ಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಅವಲಂಬಿತರಿಗೆ ವಿವಿಧ ಇಲಾಖೆಗಳ ಸಾಮಾಜಿಕ ಹಾಗೂ ಆರ್ಥಿಕ ಯೋಜನೆಗಳನ್ನು ಶೇ. ೧೦೦ ರಷ್ಟು ತಲುಪಿಸುವಂತೆ ತಿಳಿಸಿದರು. ನಗರದ ವಸತಿ ರಹಿತರಿಗೆ ಆಶ್ರಯ ತಾಣ ಒದಗಿಸುವ ಯೋಜನೆಯಡಿ ರಾತ್ರಿ ವೇಳೆ ಸಮೀಕ್ಷೆ ನಡೆಸಿ ವಸತಿ ರಹಿತರನ್ನು ಗುರುತಿಸಿ ಅವರಿಗೆ ಅವಶ್ಯಕ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಮಂಗಳ ಮಾತನಾಡಿ, ಕೌಶಲ್ಯ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿದ್ದು, ಪ್ರಸಕ್ತ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾಗಿರುವ ತರಬೇತಿಗಳನ್ನು ನೀಡಲು ಕ್ರಮ ವಹಿಸುವಂತೆ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ತರಬೇತಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು. ಪಿ.ಎಂ ಸ್ವನಿಧಿ ಯೋಜನೆಯಡಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಮಟ್ಟದ ಸಮಿತಿಯನ್ನು ಶೀಘ್ರ ರಚಿಸುವಂತೆ ತಿಳಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ. ಶ್ರೀನಿವಾಸ, ಜಿಪಂ ಉಪಕಾರ್ಯದರ್ಶಿ ರಮೇಶ್ ಮಾತನಾಡಿದರು. ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಂಬಿಕಾ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಕ್ಷ್ಮಿ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಗೀತಮ್ಮ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಲತಾ ಇದ್ದರು.