ಸಾರಾಂಶ
ಛಾಯಾಗ್ರಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕುಷ್ಟಗಿ ತಾಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ
ಕನ್ನಡಪ್ರಭ ವಾರ್ತೆ ಕುಷ್ಟಗಿಛಾಯಾಗ್ರಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಅಣ್ಣಿರಯ್ಯ ಹಿರೇಮಠ ಮಾತನಾಡಿ, ಇತ್ತೀಚೆಗೆ ಬೆಂಗಳೂರಿನ ಶಿವಾಜಿನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದರ ವಿಡಿಯೋ ಶೂಟಿಂಗ್‌ಗೆ ಹೋಗಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೆಲ ಪುಂಡರು ಹಲ್ಲೆ ನಡೆಸಿ ಗಾಯಗೊಳಿಸಿರುವುದು ಖಂಡನೀಯ ಎಂದರು.ಹೊಟ್ಟೆಪಾಡಿಗಾಗಿ ವಿಡಿಯೋ ಶೂಟಿಂಗ್ ಮಾಡುವ ಛಾಯಾಗ್ರಾಹಕನ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಘಟನೆಯಾಗಿದೆ. ಇದರಿಂದಾಗಿ ಛಾಯಾಗ್ರಾಹಕರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದು ಸಾಬೀತಾಗಿದೆ. ಈ ಬಗ್ಗೆ ರಾಜ್ಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು ಹಲ್ಲೆ ನಡೆಸಿದವರ ಮೇಲೆ ಪೊಲೀಸರಿಗೆ ದೂರು ನೀಡಿರುತ್ತಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವೃತ್ತಿನಿರತ ಛಾಯಾಗ್ರಾಹಕರಿಗೆ ಸೂಕ್ತ ರಕ್ಷಣೆ ದೊರೆಯಬೇಕು. ಹಲ್ಲೆಗೊಳಗಾದ ಛಾಯಾಗ್ರಾಹಕನಿಗೆ ಸರ್ಕಾರ ಪರಿಹಾರ ನೀಡಬೇಕು. ಇಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.ಗ್ರೇಡ್-2 ತಹಸೀಲ್ದಾರ್ ಮುರುಳೀಧರ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ ಪಾಟೀಲ, ಮಹಾಂತೇಶ ಹಿರೇಮಠ, ರವಿಕುಮಾರ, ಭೀಮಸೇನರಾವ್ ಕುಲಕರ್ಣಿ, ನಾರಾಯಣ, ಸುಲ್ತಾನ ಸೌದಾಗರ, ವೀರಣ್ಣ ಬಡಿಗೇರ, ತುಳಜಾರಾಮ ರಾಯಬಾಗಿ, ರಾಮಪ್ಪ ನೆರೆಬೆಂಚಿ, ಶಿವಾನಂದ, ತಿರುಪತಿ ಯಲಿಗಾರ, ಮಲ್ಲಿಕಾರ್ಜುನಗೌಡ, ಹನುಮಂತ, ಸಂತೋಷ, ಗಣೇಶ, ಸಿದ್ದರಾಮ ಗೌಡ, ಸಂಗಮೇಶ, ಗವಿಸಿದ್ದಪ್ಪ, ಶರಣಪ್ಪ, ಜಯರಾಜ, ವೀರೇಶ ವಂಕಲಕುಂಟ ಸೇರಿದಂತೆ ಇತರರು ಇದ್ದರು.;Resize=(128,128))
;Resize=(128,128))
;Resize=(128,128))