ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪ್ರತಿ ಟನ್ ಕಬ್ಬಿಗೆ 3500 ರು. ಬೆಲೆ ಘೋಷಣೆಗಾಗಿ ಹಾಗೂ ರೈತರ ವಿವಿಧ ಸಮಸ್ಯೆಗಳ ಕುರಿತು ಸೂಕ್ತ ನ್ಯಾಯ ನೀಡುವಂತೆ ಆಗ್ರಹಿಸಿ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಮಿತಿಯ ವತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಲಾಯಿತು.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರಿಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಮಾತ್ರ ನಮ್ಮ ಜನಪ್ರತಿನಿಧಿಗಳಿಗೆ ರೈತರ ಕಷ್ಟ ಗೊತ್ತಾಗುತ್ತದೆ. ಈ ಬಾರಿ ಪ್ರಕೃತಿ ವಿಕೋಪದ ನಡುವೆಯೂ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಾಕಷ್ಟು ನಷ್ಟ ಅನುಭವಿಸಿ ಪ್ರತಿ ಅರ್ಧ ಘಂಟೆಗೆ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ.
ಈ ಬಗ್ಗೆ ಯಾವ ಜನಪ್ರತಿನಿಧಿಗಳು ಈ ಕುರಿತು ಧ್ವನಿ ಎತ್ತುತ್ತಿಲ್ಲ. ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ, ಕಾರ್ಮಿಕರ ವೇತನ ದಿನೇದಿನೇ ಹೆಚ್ಚಾಗಿ ಕೃಷಿ ಉತ್ಪಾದನಾ ವೆಚ್ಚ ಹೆಚ್ಚಳವಾಗುತ್ತಿರುವುದರಿಂದ, ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಪ್ರತಿ ಟನ್ ಕಬ್ಬಿಗೆ 3500 ಘೋಷಣೆ ಮಾಡಿ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭ ಮಾಡಬೇಕೆಂದು ಆಗ್ರಹಿಸಲಾಯಿತು.ಸಕ್ಕರೆ ಜೊತೆಗೆ ಉಪ ಉತ್ಪನ್ನಗಳಿಂದ ಹೆಚ್ಚಿನ ಲಾಭ ಪಡೆಯುತ್ತಿರುವ ಕಾರ್ಖಾನೆಗಳು ರೈತರಿಗೆ ಅದರಲ್ಲಿಯೂ ಯೋಗ್ಯ ಲಾಭ ನೀಡಬೇಕು. ಬಾಕಿ ಉಳಿಸಿಕೊಂಡಿರುವ ರೈತರ ಬಿಲ್‍ನ್ನು ಬೇಗನೆ ಪಾವತಿ ಮಾಡಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಯಲ್ಲಿದೆ. ಬೆಳಗಾವಿ ಜಿಲ್ಲೆಯೊಂದರಲ್ಲೆ ಅಂದಾಜು 4 ಲಕ್ಷ ಎಕರೆ ಕಬ್ಬು ಬೆಳೆಯುತ್ತಿದ್ದು ಇದನ್ನೆ ನಂಬಿದ ನೂರಾರು ರೈತ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಜಿಲ್ಲೆಯ ಕಬ್ಬು ಬೆಳೆಗಾರರನ್ನೆ ಅವಲಂಬಿಸಿರುವ 10 ಸಕ್ಕರೆ ಕಾರ್ಖಾನೆ ಮಾಲಿಕರು ಕೂಡಲೇ ರೈತಪರ ಕಾಳಜಿ ವಹಿಸಿ ದುಡಿದ ದುಡಿತಕ್ಕಾದರೂ ಪ್ರತಿಟನ್ ಕಬ್ಬಿಗೆ ₹3500 ದರ ನೀಡಬೇಕು ಎಂದರು.
ರಾಜ್ಯಾದ್ಯಂತ ಕಬ್ಬು ಬೆಳೆಗಾರರು ಅನಿರ್ದಿಷ್ಟ ಪ್ರತಿಭಟನೆಯ ಧರಣಿ ಮಾಡುತ್ತಿದ್ದು ಮುಖ್ಯಮಂತ್ರಿಗಳು ಈ ಕೂಡಲೇ ಪ್ರತಿ ಟನ್ ಕಬ್ಬಿಗೆ 3500 ರು. ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲದಿದ್ದಲ್ಲಿ ರಾಜ್ಯದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಒತ್ತಾಯಿಸಿದರು .ಇದಲ್ಲದೇ ಜಿಲ್ಲೆಯ ಕರೆ ಕುಂಟೆಗಳಲ್ಲಿ ಜಾಲಿಗಿಡಗಳ ತೆರೆವುಮಾಡಿಸಿ ಕೆರೆಗಳಲ್ಲಿನ ಹೂಳೆತ್ತ ಬೇಕು. ಜಿಲ್ಲೆಯ ಯಾವುದೇ ಕುಂಟೆ ಕೆರೆ ಗಳಲ್ಲಿ ತ್ಯಾಜ್ಯ ಸುರಿಯದಂತೆ ಕ್ರಮ ವಹಿಸಬೇಕು. ಜಿಲ್ಲೆಯ ಗೌರಿಬಿದುನೂರು ಹಾಗೂ ಚಿಕ್ಕಬಳ್ಳಾಪುರದ ಕಣಿವೆ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ರೈತರು ಭಯ ಬೀತರಾಗಿದ್ದಾರೆ. ಚಿರತೆಗಳನ್ನು ಹಿಡಿಯಲು ತಕ್ಷಣ ಕ್ರ ಮ ವಹಿಸಬೇಕು. ಮೆಕ್ಕೆಜೋಳಕ್ಕೆ ಸರ್ಕಾರ ಪ್ರತಿ ಕ್ವಿಂಟಲ್‌ಗೆ 3800 ಬೆಂಬಲ ಬೆಲೆ ನಿಗದಿ ಪಡಿಸಿದ್ದು, ಗೌರಿಬುದುನೂರಿನಲ್ಲಿ ಇದುವರೆವುಗೂ ಖರೀದಿ ಕೇಂದ್ರ ತೆಗೆದಿಲ್ಲ, ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ 1700 ರು.ಗೆ ಮಾರಾಟ ಆಗುತ್ತಿದ್ದು, ಈ ಕೂಡಲೇ ಮೆಕ್ಕಜೋಳದ ಖರೀದಿ ಕೇಂದ್ರವನ್ನು ತೆರೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕ ಅಧ್ಯಕ್ಷ ನಲ್ಲೇನಹಳ್ಳಿಎನ್,ಸಿ. ಸುಬ್ರಮಣಿ, ತಾಲೂಕು ಅಧ್ಯಕ್ಷರಾದ ಲೋಕೇಶಗೌಡ, ಎ,ಎನ್.ಮುನೇಗೌಡ, ಕಾರ್ಯದರ್ಶಿಗಳಾದ ರಾಜಣ್ಣ,ಮುದ್ದುಗಂಗಪ್ಪ, ನವೀನ್ ಕುಮಾರ್, ನಿರಂಜನ, ದಿವಾಕರ್, ಶಂಕರ್, ಚಂದನ್ ಕುಮಾರ್, ಮಹಿಳಾ ಘಟಕದ ಸುವರ್ಣಮ್ಮ, ಅಮರಮ್ಮ, ಮತ್ತಿತರರು ಇದ್ದರು.ಸಿಕೆಬಿ-2 ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ಘೋಷಣೆಗಾಗಿ ಹಾಗೂ ರೈತರ ವಿವಿಧ ಸಮಸ್ಯೆಗಳ ಕುರಿತು ಸೂಕ್ತ ನ್ಯಾಯ ನೀಡುವಂತೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಮಿತಿಯ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))