ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ, ನಾಲೆಗಳು ಇಲ್ಲದೇ ರೈತರು ಪರಿತಪ್ಪಿಸುವಂತಾಗಿದೆ. ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ಹೂವು, ಹಣ್ಣು, ತರಕಾರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಸರಕಾರ ಹಾಗೂ ಜಿಲ್ಲೆಯ ರಾಜಕಾರಣಿಗಳು ಮನಸು ಮಾಡಿದರೆ ಕೃಷ್ಣಾ ನದಿ ನೀರನ್ನು ಜಿಲ್ಲೆಗೆ ಹರಿಸಬಹುದು.

ಕನ್ನಡಪ್ರಭ ವಾರ್ತೆ ಮಾಲೂರುಕೆಸಿ ವ್ಯಾಲಿ ಯೋಜನೆಯಡಿ ಸಂಸ್ಕರಿಸಿದ ನೀರನ್ನು ೩ನೇ ಹಂತದಲ್ಲಿ ಶುದ್ಧೀಕರಿಸಿ ಹರಿಸಬೇಕು, ಎತ್ತಿನಹೊಳೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಹಾಗೂ ಕೃಷ್ಣಾ ನದಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸುವಂತೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರವೇ ಸರ್ಕಾರವನ್ನು ಒತ್ತಾಯಿಸಿದೆ.

ನಗರದಲ್ಲಿ ಕರವೇ, ನಮ್ಮ ಕರ್ನಾಟಕ ಸೇನೆ, ಕನ್ನಡಪರ ಸಂಘಟನೆಗಳ ಒಕ್ಕೂಟ, ರೈತಪರ ಸಂಘಟನೆಗಳು, ಕೆಆರ್‌ಎಸ್ ಪಕ್ಷ, ಶಾಶ್ವತ ನೀರಾವರಿ ಹೋರಾಟ ಸಮಿತಿ, ದಲಿತಪರ ಸಂಘಟನೆಗಳಿಂದ ಕೆಸಿ ವ್ಯಾಲಿ ಯೋಜನೆಯಡಿ ಸಂಸ್ಕರಿಸಿದ ನೀರನ್ನು ೩ನೇ ಹಂತದಲ್ಲಿ ಶುದ್ದೀಕರಿಸಿ ಹರಿಸುವುದು ಹಾಗೂ ಕೃಷ್ಣಾ ನದಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸುವಂತೆ ಒತ್ತಾಯಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಹಸೀಲ್ಥಾರ್ ಅವರಿಗೆ ಮನವಿಪತ್ರ ಸಲ್ಲಿಸಿ ಅವರು ಮಾತನಾಡಿದರು.

ಕೋಲಾರ ಜಿಲ್ಲೆ ಬಂದ್‌ ಎಚ್ಚರಿಕೆ

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಕೋಲಾರ ಜಿಲ್ಲೆ ಬಂದ್ ಮಾಡಲಾಗುವುದೆಂದು ಸಂಘಟನೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಸಿದರು. ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ, ನಾಲೆಗಳು ಇಲ್ಲದೇ ರೈತರು ಪರಿತಪ್ಪಿಸುವಂತಾಗಿದೆ. ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ಹೂವು, ಹಣ್ಣು, ತರಕಾರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದರು. ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರಕಾರ ಕೆಸಿ ವ್ಯಾಲಿ ಯೋಜನೆಯಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಹರಿಸುತ್ತಿದೆ. ಬೆಂಗಳೂರಿನ ತ್ಯಾಜ್ಯ ನೀರು ಕೆರೆಗಳಿಗೆ ಹರಿಯುತ್ತಿದ್ದು, ಕೆರೆಗಳು ತುಂಬುತ್ತಿವೆ, ಆದರೆ ಈ ನೀರಿನಿಂದ ಯಾವುದೇ ಉಪಯೋಗವಿಲ್ಲ. ಈ ನೀರನ್ನು ೩ನೇ ಹಂತದಲ್ಲಿ ಶುದ್ದೀಕರಣಗೊಳಿಸಿ ಕೆರೆಗಳಿಗೆ ನೀರು ಹರಿಸಿದಾಗ ಮಾತ್ರ ರೈತರಿಗೆ, ಜಾನುವಾರುಗಳಿಗೆ ಉಪಯೋಗವಾಗುತ್ತದೆ. ಜಿಲ್ಲೆಯ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಜಿಲ್ಲೆಗೆ ಯಾವುದೇ ಅನುಕೂಲವಾಗುತ್ತಿಲ್ಲ ಎಂದು ಆರೋಪಿಸಿದರು.ಜಿಲ್ಲೆಗೆ ಕೃಷ್ಣಾ ನೀರು ಹರಿಸಿ

ಜಿಲ್ಲೆಯ ರಾಜಕಾರಣಿಗಳ ಶಾಪದಿಂದ ರೈತರಿಗೆ ಅನುಕೂಲವಾಗುವಂತಹ ಯಾವುದೇ ಯೋಜನೆಗಳು ಅನುಷ್ಠಾನವಾಗುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಇಲ್ಲವೇ ಯಾವ ರಾಜಕಾರಣಿ ಬಂದರೂ ಸಹ ಕೇವಲ ಆಶ್ವಾಸನೆಯಷ್ಟೇಯಾಗಿದೆ. ರಾಜ್ಯದ ಕೂಗಳತೆಯಲ್ಲಿ ಕೃಷ್ಣಾ ನದಿ ನೀರು ಹರಿಯುತ್ತಿದೆ. ಸರಕಾರ ಹಾಗೂ ಜಿಲ್ಲೆಯ ರಾಜಕಾರಣಿಗಳು ಮನಸು ಮಾಡಿದರೆ ಕೃಷ್ಣಾ ನದಿ ನೀರನ್ನು ಜಿಲ್ಲೆಗೆ ಹರಿಸಬಹುದು ಎಂದರು.

ಕೃಷ್ಣಾ ನದಿ ನೀರನ್ನು ಹರಿಸುವಂತೆ ಮೊದಲಿಗೆ ಮಾಲೂರಿನಲ್ಲಿ ನಾನಾ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯ ಮೂಲಕ ಸರಕಾರದ ಗಮನಕ್ಕೆ ತರಲಾಗಿದೆ. ಈ ಯೋಜನೆಯನ್ನು ಆದಷ್ಟು ಬೇಗನೆ ಕಾರ್‍ಯರೂಪಕ್ಕೆ ತರದಿದ್ದಲ್ಲಿ ಕರವೇ ಸಂಘಟನೆಯ ನೇತೃತ್ವದಲ್ಲಿ ರಾಜ್ಯಾದ್ಯತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.ಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹೂಡಿ ವಿಜಯ್ ಕುಮಾರ್, ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ, ನಮ್ಮ ಕರ್ನಾಟಕ ಸೇನೆಯ ಪ್ರಧಾನ ಕಾರ್ಯದರ್ಶಿ ಚಾಕನಹಳ್ಳಿ ನಾಗರಾಜ್, ಕರವೇ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ತಾ.ಅಧ್ಯಕ್ಷ ನಾರಾಯಣಸ್ವಾಮಿ(ನಾನಿ), ಪ್ರಧಾನ ಕಾರ್ಯದರ್ಶಿ ದಯಾನಂದ್, ನಮ್ಮ ಕರ್ನಾಟಕ ಸೇನೆಯ ರಾಜ್ಯ ಉಪಾಧ್ಯಕ್ಷ ಚ.ನಾಗರಾಜ್, ಜಿಲ್ಲಾಧ್ಯಕ್ಷ ಎಸ್.ಎಂ.ರಾಜು, ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಆಟೋ ಘಟಕದ ಶ್ರೀನಿವಾಸ್, ಜಗದೀಶ್, ಕಾರ್ಯಾಧ್ಯಕ್ಷ ರಾಮಕೃಷ್ಣಪ್ಪ, ಕೊಪ್ಪ ಚಂದ್ರು, ರವಿಚಂದ್ರ ಇದ್ದರು.