ಸಾರಾಂಶ
ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ- ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರಗಳಿಗೆ ತಲಾ ₹50 ಕೋಟಿ ನೀಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಧಾರವಾಡ ಜಿಲ್ಲೆಗೆ ಸರ್ಕಾರಿ ಎಂಜಿನೀಯರಿಂಗ್ ಕಾಲೇಜು ಹಾಗೂ ಸುಪರ್ ಸ್ಪೆಷಾಲಿಟಿ ಮೆಡಿಕಲ್ ಕಾಲೇಜ್, ವಿದ್ಯಾರ್ಥಿಗಳಿಗೆ ಹೆಚ್ಚಿನ ವಸತಿ ನಿಲಯಗಳನ್ನು ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಜಿಲ್ಲೆಯ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿಗಳ ಮುಂದಿಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಶಾಸಕರೊಂದಿಗೆ ಒನ್ ಟು ಒನ್ ನಡೆಸಿದ ಮಾತುಕತೆಯ ಸಂದರ್ಭದಲ್ಲಿ ಈ ಬೇಡಿಕೆಗಳನ್ನಿಟ್ಟಿದ್ದಾರೆ. ಮುಂಗಾರು ಮಳೆಯಿಂದ ಆದ ಬೆಳೆಹಾನಿಗೆ ಪರಿಹಾರ ಕೊಡಬೇಕು. ರಸ್ತೆ ಅಭಿವೃದ್ಧಿಗಾಗಿ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಹೆಚ್ಚಿನ ಅನುದಾನ ಮಾಡಬೇಕು ಎಂದು ಮನವಿ ಸಲ್ಲಿಸಿದರು.ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ- ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರಗಳಿಗೆ ತಲಾ ₹50 ಕೋಟಿ ನೀಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ ಅಹ್ಮದ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಜಂಟಿ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಪ್ತ ಸಹಾಯಕ ವೆಂಕಟೇಶ ಸೇರಿದಂತೆ ಮತ್ತಿತರರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))