ಸಂವಿಧಾನ ವಿರೋಧಿ ಅನಂತ್‌ ವಿರುದ್ಧ ಕ್ರಮಕ್ಕೆ ಆಗ್ರಹ

| Published : Mar 14 2024, 02:07 AM IST

ಸಾರಾಂಶ

ದೊಡ್ಡಬಳ್ಳಾಪುರ: ಸಂವಿಧಾನ ಬದಲಾವಣೆಯ ಮಾತುಗಳನ್ನು ಪದೇ ಪದೇ ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿರುವ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆರೋಪಿಸಿದರು

ದೊಡ್ಡಬಳ್ಳಾಪುರ: ಸಂವಿಧಾನ ಬದಲಾವಣೆಯ ಮಾತುಗಳನ್ನು ಪದೇ ಪದೇ ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿರುವ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಗಡೆ ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ಮೋದಿಯವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಂವಿಧಾನ ಹೋದರೆ ನಾಡಿನ ಜನರ ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಎಚ್ಚರಿಸಿದರು.

8 ದಿನದೊಳಗೆ ಕ್ರಮಕ್ಕೆ ಗಡುವು:

ಹೆಗಡೆ ವಿರುದ್ದ ಬಿಜೆಪಿ 8 ದಿನಗಳ ಒಳಗೆ ಗಂಭೀರ ಕ್ರಮ ಜರುಗಿಸಬೇಕು. ಚುನಾವಣಾ ರಾಜಕಾರಣದಿಂದ ಅವರನ್ನು ನಿಷೇಧಿಸಬೇಕು. ತಪ್ಪಿದಲ್ಲಿ ಇಡೀ ರಾಜ್ಯಾದ್ಯಂತ ಕಾಂಗ್ರೆಸ್‌ ದೊಡ್ಡ ಮಟ್ಟದ ಹೋರಾಟ ನಡೆಸಲಿದೆ ಎಂದು ಹೇಳಿದರು.

ಉಚ್ಚಾಟಿಸದಿದ್ದರೆ ಹೋರಾಟ:

ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಬೈರೇಗೌಡ ಮಾತನಾಡಿ, ಸಂವಿಧಾನ ಬದಲಾವಣೆಗಾಗಿ ಬಿಜೆಪಿಗೆ ಲೋಕಸಭೆಯಲ್ಲಿ 400ಕ್ಕೂ ಅಧಿಕ ಸ್ಥಾನ ಬೇಕು ಎಂಬ ಅವರ ಹೇಳಿಕೆಯಿಂದ ಆ ಪಕ್ಷದ ನಿಜಬಣ್ಣ ಬಯಲಾಗಿದೆ. ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುವ ಅನಂತ್ ಕುಮಾರ್ ಹೆಗಡೆ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಬೇಕು. ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಶಿಸ್ತಿನ ಕ್ರಮ ತೆಗೆದುಕೊಳ್ಳಬೇಕು. ತಪ್ಪಿದಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ನಗರಸಭೆ ಮಾಜಿ ಸದಸ್ಯ ಬಿ.ಜಿ.ಹೇಮಂತರಾಜು ಮತ್ತಿತರರು ಉಪಸ್ಥಿತರಿದ್ದರು.ಬಾಕ್ಸ್‌................

ಚುನಾವಣಾ ಬಾಂಡ್‌ ಮುಚ್ಚಲು ಸಿಎಎ ಮುನ್ನೆಲೆಗೆ!

ಚುನಾವಣಾ ಬಾಂಡ್‌ ವಿಚಾರದಲ್ಲಿ ಬಿಜೆಪಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಲಿರುವ ಕಳಂಕವನ್ನು ಮರೆಮಾಚಲು ಪೌರತ್ವ ತಿದ್ದುಪಡಿ ಕಾಯ್ದೆ-ಸಿಎಎ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚುನಾವಣಾ ಸಂದರ್ಭದಲ್ಲಿ ಸಂಭವನೀಯ ಹಿನ್ನಡೆ ತಪ್ಪಿಸಿಕೊಳ್ಳಲು ಇದು ದೊಡ್ಡ ಕುತಂತ್ರ ಎಂದು ಜಿ.ಲಕ್ಷ್ಮೀಪತಿ ಆರೋಪಿಸಿದರು.13ಕೆಡಿಬಿಪಿ3-

ದೊಡ್ಡಬಳ್ಳಾಪುರದಲ್ಲಿ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕು ಅಧ್ಯಕ್ಷ ಬೈರೇಗೌಡ, ನಗರಾಧ್ಯಕ್ಷ ಕೆ.ಪಿ.ಜಗನ್ನಾಥ್, ಹೇಮಂತರಾಜು ಇತರರಿದ್ದರು.