ಸಾರಾಂಶ
ರಾಣಿಬೆನ್ನೂರು: ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯ ಪರಮೇಶ್ವರಪ್ಪ ಆರ್.ಸಿ. ಮೇಲೆ ಕ್ರಮಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ನಗರದ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರಾಜೇಶ ಸುರಗಿಹಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ಡಾ. ಪರಮೇಶ್ವರಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಬರುವ ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಖೇದಕರ. ಇವರು ಈ ಹಿಂದೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ಸ್ವಾತಂತ್ರ್ಯದ 75ನೇ ವರ್ಷಾಚರಣೆ ವೇಳೆ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ ಭಾವಚಿತ್ರ ಇರಿಸದೇ ಅಗೌರವ ತೋರಿದ್ದರೂ ಅವರ ಮೇಲೆ ಇಲಾಖೆಯೂ ಯಾವುದೇ ಕ್ರಮ ಜರುಗಿಸಿಲ್ಲ. ಇನ್ನು ಮೇಲಾದರೂ ಅವರ ಮೇಲೆ ಎರಡ್ಮೂರು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ, ಸುರೇಶಪ್ಪ ಗರಡಿಮನಿ, ಸಿದ್ಧಾರೂಢ ಗುರುಂ, ಕೊಟ್ರೇಶಪ್ಪ ಎಮ್ಮಿ, ಚಂದ್ರಪ್ಪ ಬಣಕಾರ, ಮಲ್ಲಿಕಾರ್ಜುನ ಸಾವಕ್ಕಳವರ, ಕರಬಸಪ್ಪ ಶಂಕ್ರನಹಳ್ಳಿಮಠ, ಸಂಜೀವ ಕನವಳ್ಳಿ, ಪರಶುರಾಮ ಕುರುವತ್ತಿ, ರಿಯಾಜ ದೊಡ್ಡಮನಿ, ಗೋಪಿ ಕುಂದಾಪುರ, ರೇವಣಸಿದ್ದಯ್ಯ ಮೊಡರವಳ್ಳಿ, ಮಾಲತೇಶ ಮ್ಯಾಗೇರಿ, ಪಾಲಕ್ಷಪ್ಪ ಕಡೇಮನಿ, ಸಂತೋಷ ಕನ್ನಪ್ಪಳವರ, ಕುಮಾರ ಸುಳ್ಳನ್ನವರ, ಹಾಲೇಶ ಕೆಂಚನಾಯ್ಕರ, ಮಂಜು ದಾವಣಗೆರೆ ಮತ್ತಿತರರು ಪ್ರತಿಭಟನೆಯಲ್ಲಿದ್ದರು.ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ
ಹಾನಗಲ್ಲ: ತಾಲೂಕಿನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೭ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಜನಸಂಪರ್ಕ ಕಚೇರಿಯಲ್ಲಿ ಚಾಲನೆ ನೀಡಿದರು.ಅಭಿಯಾನದ ಭಿತ್ತಿ ಪತ್ರ ಬಿಡುಗಡೆಗೊಳಿಸಿದ ಅವರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಲಸಿಕೆದಾರರು ಮನೆ ಬಾಗಿಲಿಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ. ರೈತ ಸಮೂಹ ಅಭಿಯಾನದ ಯಶಸ್ಸಿಗೆ ಸಹಕರಿಸಬೇಕಿದೆ. ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ಹಾಕಿಸುವ ಮೂಲಕ ರಾಜ್ಯವನ್ನು ಕಾಲುಬಾಯಿ ರೋಗಮುಕ್ತ ವಲಯವನ್ನಾಗಿಸುವ ಸಂಕಲ್ಪ ಮಾಡಬೇಕಿದೆ. ತಾಲೂಕಿನಲ್ಲಿ ೫೨ ಸಾವಿರ ದನ ಮತ್ತು ಎಮ್ಮೆಗಳಿಗೆ ಕಾಲುಬಾಯಿ ರೋಗ ಮತ್ತು ಚರ್ಮಗಂಟು ರೋಗದ ಲಸಿಕೆಯನ್ನು ಜೂ.೯ ರ ವೆರೆಗೆ ಹಾಕಲಾಗುವುದು ಎಂದು ತಿಳಿಸಿದರು.ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗಿರೀಶ ರೆಡ್ಡೇರ, ಹಿರಿಯ ಪಶು ವೈದ್ಯಾಧಿಕಾರಿ ಡಾ.ಅಮಿತ್ ಪುಠಾಣಿಕರ, ಡಾ. ಮಂಜುನಾಥ ಗಂಗಿಮಾಳಮ್ಮನವರ, ಡಾ. ಸಂತೋಷ, ಡಾ. ರಾಕೇಶ, ಪಶು ವೈದ್ಯಕೀಯ ಪರೀಕ್ಷಕರ ಸಿ.ಎ. ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.