ಸಾರಾಂಶ
ಸರ್ಕಾರಿ ನೌಕರರಿಗೆ ಭಯ ರಹಿತವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು
ಲಕ್ಷ್ಮೇಶ್ವರ: ಗಜೇಂದ್ರಗಡ ತಾಲೂಕಿನ ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಅವರಿಗೆ ಮಾಜಿ ಸಚಿವ ಕಳಕಪ್ಪ ಬಂಡಿ ಅವಾಚ್ಯ ಪದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಮಾಜಿ ಶಾಸಕರ ಬಂಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ವಾಸುದೇವ ಸ್ವಾಮಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.ಈ ವೇಳೆ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ಎಚ್. ಪಾಟೀಲ ಮಾತನಾಡಿ, ಬಿಜೆಪಿ ವಕ್ಫ್ ಹೆಸರು ವಿವಿಧ ರೈತರ ಪಹಣಿಯಲ್ಲಿ ದಾಖಲಾಗಿರುವುದನ್ನು ಖಂಡಿಸಿ ಸೋಮವಾರ ಗಜೇಂದ್ರಗಡ ಪಟ್ಟಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮಾಜಿ ಶಾಸಕ ಕಳಕಪ್ಪ ಬಂಡಿ ಸಾರ್ವಜನಿಕವಾಗಿ ತಾಲೂಕಿನ ತಹಸೀಲ್ದಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ.
ಈ ಕುರಿತು ಜಿಲ್ಲಾಡಳಿತ ಮಾಜಿ ಶಾಸಕ ಕಳಕಪ್ಪ ಬಂಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರಿ ನೌಕರರಿಗೆ ಭಯ ರಹಿತವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ಸಂಘದ ಸದಸ್ಯರು ಇದ್ದರು.