ನಗರಸಭೆ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹ

| Published : Nov 29 2023, 01:15 AM IST

ಸಾರಾಂಶ

ನಗರಸಭೆ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹ ಅಪರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ

- ಅಪರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಗರಸಭೆ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ನಗರಸಭೆ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರನ್ನು ಮಂಗಳವಾರ ಭೇಟಿ ಮಾಡಿದ ಸಂಘಟನೆ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಅಧ್ಯಕ್ಷರ ಕಾರನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ನಗರಸಭೆ ವಾಹನವನ್ನು ಖಾಸಗಿ ಕೆಲಸಗಳಿಗೆ ಬಳಸಿಕೊಳ್ಳುವಂತಿಲ್ಲ, ಹೀಗಿದ್ದರೂ ಸಹ ನಗರಸಭೆ ಅಧ್ಯಕ್ಷರು ಕಾನೂನನ್ನು ಗಾಳಿಗೆ ತೂರಿ ವಾಹನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪದಾಧಿಕಾರಿಗಳು ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರುವ ಜೊತೆಗೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ರಾಜ್ಯಾಧ್ಯಕ್ಷ ಸೋಮು ನಾಯಕ್, ತಾಲೂಕು ಅಧ್ಯಕ್ಷ ಕಾರ್ತಿಕ್, ಸಂಘಟನಾ ಕಾರ್ಯದರ್ಶಿ ಕಣಿವೆಹಳ್ಳಿ ಚಂದ್ರು ಹಾಜರಿದ್ದರು. 28 ಕೆಸಿಕೆಎಂ 2

ಚಿಕ್ಕಮಗಳೂರು ನಗರಸಭೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ನಗರಸಭೆ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಕಾರ್ಯಕರ್ತರು ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.