ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗಹಿಂದೂ ಮಹಾ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಟಿ. ಬದ್ರಿನಾಥ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಮಿತಿ ಮತ್ತೋರ್ವ ಮಾಜಿ ಅಧ್ಯಕ್ಷ ಸೈಟ್ ಬಾಬು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.ಹಿಂದೂ ಸಂಘಟನೆಯ ಯುವಕರನ್ನು ದಾರಿ ತಪ್ಪಿಸುತ್ತಿರುವ ಬದ್ರಿನಾಥ್ ಕೋಟ್ಯಂತರ ರುಪಾಯಿ ಡೀಲ್ ಬಗ್ಗೆ ಮಾತನಾಡಿದ್ದಾರೆ. ಡೀಲ್ ಸಂಭಾಷಣೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಅವರ ಈ ನಡೆ ಕೋಮು ಪ್ರಚೋದನೆಗೆ ದಾರಿ ಮಾಡಿಕೊಟ್ಟಿದೆ. ಹಾಗಾಗಿ ಬದ್ರಿನಾಥ್ ಅವರನ್ನು ಗಣಪತಿ ಉತ್ಸವದಿಂದ ದೂರ ಇಡುವಂತೆ ಮನವಿ ಮಾಡಿದರು.ಬದ್ರಿನಾಥ್ ನಡೆ ಬಗ್ಗೆ ಈಗಾಗಲೇ ಕಳೆದ 15 ರಂದು ಹಿಂದೂ ಪರ ಸಂಘಟನೆಗಳ ಮುಖಂಡರು ಆರ್ ಎಸ್ ಎಸ್ ಕಚೇರಿಗೆ ಹೋಗಿ ಪ್ರಮುಖರ ಭೇಟಿ ಮಾಡಿ ಚರ್ಚಿಸಿದ್ದಾರೆ. ಆರ್ ಎಸ್ ಎಸ್ ಪ್ರಮುಖರು ಕೂಡಾ ದೂರವಿಡುವ ಭರವಸೆ ನೀಡಿದ್ದಾರೆ. ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.