ಹಳ್ಳೂರು ಗ್ರಾಮದಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯ

| Published : Sep 04 2025, 01:01 AM IST

ಸಾರಾಂಶ

ವೈದ್ಯರು ಹಾಗೂ ಸಿಬ್ಬಂದಿ ಕಿತ್ತಾಟದಿಂದಾಗಿ ಆಸ್ಪತ್ರೆಗೆ ಬಾರದೆ ರಜೆ ಹಾಕಿ ಮನೆಯಲ್ಲಿದ್ದಾರೆ. ಇದರಿಂದ ರೋಗಿಗಳಿಗೆ ಸಾಕಷ್ಟು ಅನಾನುಕೂಲ ಉಂಟಾಗಿದೆ. ಸಮಸ್ಯೆ ಏನೇ ಇದ್ದರೂ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಸೇವೆಗೆ ರಜೆ ಹಾಕಿ ಮನೆಯಲ್ಲಿಯೇ ಕುಳಿತುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದರು.

ರಟ್ಟೀಹಳ್ಳಿ: ತಾಲೂಕಿನ ಹಳ್ಳೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಕಿತ್ತಾಟದಿಂದ ಆಸ್ಪತ್ರೆಗೆ ಬಾರದೆ ಇರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಟಿಎಚ್‌ಒ ಝೆಡ್.ಆರ್. ಮಕಾಂದಾರ ಅವರಿಗೆ ಮನವಿ ಸಲ್ಲಿಸಿದರು.

ವೈದ್ಯರು ಹಾಗೂ ಸಿಬ್ಬಂದಿ ಕಿತ್ತಾಟದಿಂದಾಗಿ ಆಸ್ಪತ್ರೆಗೆ ಬಾರದೆ ರಜೆ ಹಾಕಿ ಮನೆಯಲ್ಲಿದ್ದಾರೆ. ಇದರಿಂದ ರೋಗಿಗಳಿಗೆ ಸಾಕಷ್ಟು ಅನಾನುಕೂಲ ಉಂಟಾಗಿದೆ. ಸಮಸ್ಯೆ ಏನೇ ಇದ್ದರೂ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಸೇವೆಗೆ ರಜೆ ಹಾಕಿ ಮನೆಯಲ್ಲಿಯೇ ಕುಳಿತುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದರು.

ಘಟನೆಗೆ ಕಾರಣರಾದ ಓರ್ವ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಬೇಕು. ಅಲ್ಲದೆ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳು ಕಾಡುತ್ತಿವೆ ಎಂದು ಹಳ್ಳೂರು, ಕಮಲಾಪುರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ಟಿಎಚ್‍ಒ ಝೆಡ್‌.ಆರ್‌. ಮಕಾಂದಾರ ಅವರು, ನಿಮ್ಮ ಮನವಿಯನ್ನು ಮುಂದಿನ ಕ್ರಮಕ್ಕಾಗಿ ಮೇಲಧಿಕಾರಿಗಳ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿದರು.ಆರೋಗ್ಯ ಇಲಾಖೆಯ ರಾಮಪ್ಪ ಸದರಪ್ಪನವರ, ಪಿ.ಎಚ್. ದುಗ್ಗತ್ತಿ, ವೈ.ಕೆ. ಮ್ಯಾದರ್, ಹಳ್ಳೂರು, ಕಮಲಾಪುರ ಗ್ರಾಮದ ಮುಖಂಡರು, ಗ್ರಾಪಂ ಹಾಲಿ, ಮಾಜಿ ಸದಸ್ಯರು, ಯುವಕರು ಮುಂತಾದವರು ಇದ್ದರು.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಹಾವೇರಿ: ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಕ್ಷೌರಿಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಕುರುಬಗೊಂಡ ಗ್ರಾಮದ ಶಿವಯೋಗೆಪ್ಪ ಹಡಪದ(46) ಆತ್ಮಹತ್ಯೆಗೆ ಶರಣಾದವರು. ಈತ ಯಾವುದೋ ಕೊರಗಿನಲ್ಲಿ ನೊಂದು ಮನೆಯ ಹಿತ್ತಲಿನಲ್ಲಿರುವ ಹುಣಸಿಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ ಎಂದು ಮೃತನ ಮಗ ವಿಶ್ವ ಹಡಪದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.