ಸಾರಾಂಶ
ಕೆಲ ವ್ಯಾಪಾರಿಗಳು ಗೊಬ್ಬರದ ಜತೆಗೆ ಕ್ರಿಮಿನಾಶ ಉತ್ಪನ ರೈತರಿಗೆ ಖರೀದಿಸುವಂತೆ ತಾಕೀತು ಮಾಡುತ್ತಿದ್ದಾರೆ.
ಗದಗ: ರೈತರಿಗೆ ಸಮರ್ಪಕ ಯೂರಿಯಾ ಗೊಬ್ಬರ ಪೂರೈಕೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ವರ್ಷ ಉತ್ತಮ ಮಳೆಯಾಗುತ್ತಿದ್ದು, ಮಳೆಯಾಶ್ರಿತ ಭೂಮಿಯಲ್ಲಿ ಈಗಾಗಲೇ ಗೋವಿನಜೋಳ, ಹೆಸರು, ತೊಗರಿ, ಈರುಳ್ಳಿ, ಮೆಣಸಿನಕಾಯಿ, ಸೂರ್ಯಕಾಂತಿ ಬಿತ್ತನೆ ಮಾಡಿದ್ದು, ಈ ಎಲ್ಲ ಬೆಳೆಗಳಿಗೆ ಯೂರಿಯಾ, ಡಿಎಪಿ ಹಾಗೂ ಇತರೆ ರಸಗೊಬ್ಬರಗಳ ಅವಶ್ಯಕ ಇದ್ದು, ಈಗಾಗಲೇ ಲಭ್ಯವಿರುವ ಅಲ್ಪ ಪ್ರಮಾಣದ ಗೊಬ್ಬರಕ್ಕೆ ರೈತರು ಪೈಪೋಟಿ ನಡೆಸುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ ಕೆಲ ವ್ಯಾಪಾರಿಗಳು ಗೊಬ್ಬರದ ಜತೆಗೆ ಕ್ರಿಮಿನಾಶ ಉತ್ಪನ ರೈತರಿಗೆ ಖರೀದಿಸುವಂತೆ ತಾಕೀತು ಮಾಡುತ್ತಿದ್ದಾರೆ. ಇದು ರೈತರಿಗೆ ಹೊರೆಯಾಗಿದೆ.ಜಿಲ್ಲೆಯಲ್ಲಿ ರಸಗೊಬ್ಬರ ಕಳ್ಳ ಸಂತೆಯಲ್ಲಿ ಮಾರಾಟವಾಗುತ್ತದೆ. ಕೂಡಲೇ ಇಂತಹವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ರೈತರಿಗೆ ಸಮರ್ಪಕ ಗೊಬ್ಬರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ವೇಳೆ ರೈತರು ಇದ್ದರು.