ಸಾರಾಂಶ
ಮಸ್ಕಿ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಚಾರ ತಡೆದು ಪ್ರತಿಭಟಿಸಲಾಯಿತು.
ಕನ್ನಡಪ್ರಭ ವಾರ್ತೆ ಮಸ್ಕಿ
ಸಂಸತ್ ಸದನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಮತ್ತೆ ಮತ್ತೆ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ ಎಂದು ಹೇಳಿ ಅವಮಾನ ಮಾಡಿರುವ ಅಮಿತ್ ಶಾರ ರಾಜೀನಾಮೆ ಒತ್ತಾಯಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.ಪಟ್ಟಣದಲ್ಲಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ ಅವರು, ಕೇಂದ್ರ ಗೃಹ ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವ ಅಮಿತ್ ಶಾ ಅವರು ಸಂಸತ್‌ನಲ್ಲಿ ಡಾ.ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಕೂಡಲೇ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಸಂಪುಟದಿಂದ ವಜಾಗೊಳಿಸಬೆಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡಪ್ಪ ಮುರಾರಿ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪುರ, ತುರುಮಂದೆಪ್ಪ ಕಟ್ಟಿಮನಿ, ಮೌನೇಶ್ ಮುರಾರಿ, ಕಾಸಿಮಪ್ಪ ಡಿ. ಮುರಾರಿ, ಕಿರಣ್ ಮುರಾರಿ, ಮಲ್ಲಪ್ಪ ಗೊನಾಳ, ಸಂತೋಷ ಹಿರೇದಿನ್ನಿ, ಮಾರುತಿ ಜಿನ್ನಾಪೂರ, ರಮೇಶ್ ಉಸ್ಕಿಹಾಳ, ಜಮದಗ್ನಿ ಗೊನಾಳ ಸೇರಿದಂತೆ ಇತರರಿದ್ದರು.