ತೊಗರನಹಳ್ಳಿ ರಸ್ತೆ ಡಾಂಬರೀಕರಣಕ್ಕೆ ಒತ್ತಾಯ

| Published : Sep 12 2025, 12:06 AM IST

ಸಾರಾಂಶ

ಈ ರಸ್ತೆಯ ದುರಸ್ತಿಗೆ ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ತೊಗರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಕ್ಕೆ ಹೋಗಬೇಕಾಗಿದ್ದು, ದಿನಕ್ಕೆರಡು ಬಾರಿ ಬರುವ ಸಾರಿಗೆ ಬಸ್ ಬಸ್ಸನ್ನೇ ಅವಲಂಭಿಸಿದ್ದಾರೆ. ರಸ್ತೆ ಹದಗಟ್ಟ ಕಾರಣ ಕೆಲವೊಮ್ಮೆ ಈ ಬಸ್ ಬರಲು ಸಾಧ್ಯವಾಗದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುವಂತಾಗಿದೆ. ಇನ್ನು ಇತರೆ ವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.

ಕನ್ನಡಪ್ರಭ ವಾರ್ತೆ ಆಲೂರು

ತಾಲೂಕಿನ ಕಸಬಾ ಹೋಬಳಿಯ ಕಣತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ, ತೊಗರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಸಂಪೂರ್ಣ ಗುಂಡಿಮಯವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಈ ರಸ್ತೆಯ ದುರಸ್ತಿಗೆ ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ತೊಗರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಕ್ಕೆ ಹೋಗಬೇಕಾಗಿದ್ದು, ದಿನಕ್ಕೆರಡು ಬಾರಿ ಬರುವ ಸಾರಿಗೆ ಬಸ್ ಬಸ್ಸನ್ನೇ ಅವಲಂಭಿಸಿದ್ದಾರೆ. ರಸ್ತೆ ಹದಗಟ್ಟ ಕಾರಣ ಕೆಲವೊಮ್ಮೆ ಈ ಬಸ್ ಬರಲು ಸಾಧ್ಯವಾಗದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುವಂತಾಗಿದೆ. ಇನ್ನು ಇತರೆ ವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.

ಸಂಪೂರ್ಣವಾಗಿ ಹದಗೆಟ್ಟಿರುವ ಈ ರಸ್ತೆಗೆ ಡಾಂಬರೀಕರಣ ನಡೆಸುವಂತೆ ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾರೊಬ್ಬರೂ ಇತ್ತ ತಲೆ ಹಾಕಿಲ್ಲ. ಪಂಚಾಯತಿಯವರನ್ನು ಕೇಳಿದರೆ ನಮ್ಮಲ್ಲಿ ಅನುದಾನವಿಲ್ಲವೆಂದು ಹೇಳುತ್ತಾರೆ. ಇನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಕೇಳಿದರೆ ದುರಸ್ತಿಗೊಳಿಸುವುದಾಗಿ ಸುಳ್ಳು ಭರವಸೆ ನೀಡುತ್ತಾರೆ. ಗುಂಡಿಮಯ ರಸ್ತೆಯಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ಗ್ರಾಮಸ್ಥರು ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗುವ ಮುನ್ನ ಸಂಬಂಧಪಟ್ಟವರು ಇತ್ತ ಗಮನಹರಿಸಿ ರಸ್ತೆಯನ್ನು ದುರಸ್ತಿಗೊಳಿಸಬೇಕಾಗಿದೆ.

ಶೀಘ್ರ ಶಾಸಕ ಸಿಮೆಂಟ್ ಮಂಜು ಅವರು ಇತ್ತ ಗಮನಹರಿಸಿ ಈ ಗ್ರಾಮದ ಸಂಪರ್ಕ ರಸ್ತೆಯನ್ನು ಡಾಂಬರ್ ಅಥವಾ ಕಾಂಕ್ರೀಟ್ ರಸ್ತೆಯನ್ನಾಗಿ ಮಾಡಬೇಕಾಗಿ ಗ್ರಾಮಸ್ಥರ ಪರವಾಗಿ ಒತ್ತಾಯಿಸುತ್ತೇವೆ ಎಂದು ಗ್ರಾಮಸ್ಥ ಚಂದ್ರ ಶೆಟ್ಟಿ ಹೇಳಿದರು.