ಅನಧಿಕೃತ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹ

| Published : Feb 06 2025, 12:17 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನನಬಾಗೇವಾಡಿ ತಾಲೂಕಿನ ಹುಲಬೆಂಚಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿದೆ. ಕೂಡಲೇ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಆಗ್ರಹಿಸಿ ಬುಧವಾರ ಗ್ರಾಮದ ಮಹಿಳೆಯರು ತಹಸೀಲ್ದಾರ್‌ ಕಚೇರಿಗೆ ತೆರಳಿ ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಸವನನಬಾಗೇವಾಡಿ

ತಾಲೂಕಿನ ಹುಲಬೆಂಚಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿದೆ. ಕೂಡಲೇ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಆಗ್ರಹಿಸಿ ಬುಧವಾರ ಗ್ರಾಮದ ಮಹಿಳೆಯರು ತಹಸೀಲ್ದಾರ್‌ ಕಚೇರಿಗೆ ತೆರಳಿ ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಭೀಮಬಾಯಿ ಪಾಟೀಲ, ಸತ್ಯವ್ವ ಪೋಲೇಶಿ ಮಾತನಾಡಿ, ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಕಲಹಉಂಟಾಗಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಕುಡಿತದ ಚಟಕ್ಕೆ ಪುರುಷರು ಅಂಟಿಕೊಂಡು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಕೂಡಲೇ ಗ್ರಾಮದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಯಾವುದೇ ರೀತಿಯಲ್ಲಿ ಪರವಾನಗಿ ಪಡೆದುಕೊಂಡು ಮದ್ಯ ಮಾರಾಟ ಮಾಡುವದು ಬೇಡ. ಮದ್ಯದಿಂದಾಗಿ ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಮಕ್ಕಳ ಮೇಲೆ ಪ್ರಭಾವ ಸಹ ಬೀರುತ್ತದೆ. ಅವರ ಭವಿಷ್ಯ ಹಾಳಾಗುತ್ತದೆ. ನಮ್ಮ ಮನವಿಗೆ ಸ್ಪಂದಿಸದೇ ಹೋದರೆ ಮುಂದಿನ ದಿನಗಳಲ್ಲಿ ಅಬಕಾರಿ ಇಲಾಖೆಯ ಮುಂದೆ ಧರಣಿ ಕುಳಿತುಕೊಳ್ಳುವದಾಗಿ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಶ್ರೀಶೈಲ ಸಾಸನೂರ, ವಿಠ್ಠಲಗೌಡ ಬಿರಾದಾರ, ಶಿವಾನಂದ ಬಿರಾದಾರ, ಬನ್ನೆಪ್ಪ ಜೋಗಿ, ಶಿವಾನಂದ ಬಡಿಗೇರ, ಸಂತೋಷ ಬಿರಾದಾರ, ಶ್ರೀಶೈಲ ಮನ್ಯಾಳ, ರೇಣುಕಾ ಇಟಗಿ, ನಿಂಗಮ್ಮ ಬಿರಾದಾರ, ಮಹಾನಂದಾ ಬಡಿಗೇರ, ಕಾಳಮ್ಮ ಬಡಿಗೇರ, ದ್ಯಾಮವ್ವ ಸಂಕನಾಳ, ಮುದಕವ್ವ ಜೋಗಿ, ಬಸಪ್ಪ ಸಂಕಾಳ, ಯಲ್ಲಪ್ಪ ಜೋಗಿ ಇತರರು ಇದ್ದರು.