ಕನ್ನಡಪ್ರಭ ವಾರ್ತೆ ಬಾಗಲಕೋಟೆಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ 3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಿಸುವುದಕ್ಕೆ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆಸಹಾಯಕ ಗುರುನಾಥ ಎಂ.ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ 3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ ಮಾಡಿಸುವುದಕ್ಕೆ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆಸಹಾಯಕ ಗುರುನಾಥ ಎಂ.ಮಸಳಿ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ.ಮುಧೋಳ ತಾಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಗೋವಿಂದಪ್ಪ ಮೆಟಗುಡ್ಡ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ. ಫಿರ್ಯಾದಿದಾರರಿಗೆ ಕಳೆದ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ ಗೂಡ್ಸ್ ವಾಹನ ಖರೀದಿಗೆ ನಿಗಮದಿಂದ 3 ಲಕ್ಷ ಸಹಾಯಧನ ಮಂಜೂರಾಗಿತ್ತು. ಈ ಹಣವನ್ನು ಮಹೇಂದ್ರಾ ಫೈನಾನ್ಸ್‌ಗೆ ಬಿಡುಗಡೆ ಮಾಡಿರುವ ಮಂಜೂರಾತಿ ಆದೇಶ ನೀಡಲು ಆರೋಪಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸೆ.8ರಂದು ಮಂಜೂರಾತಿ ಆದೇಶ ನೀಡಿದ ಬಳಿಕ, ಯೋಜನೆಯಡಿ ವಾಹನ ಖರೀದಿಸಿದ ನಂತರ ಜಿಪಿಎಸ್ ಫೋಟೊ ಮಾಡಿಸಲು ವಾಹನವನ್ನು ತಮ್ಮ ಬಳಿ ತರಬೇಕು ಎಂದು ತಿಳಿಸಿ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಲೋಕಾಯುಕ್ತ ಡಿಎಸ್ಪಿ ಸುರೇಶರೆಡ್ಡಿ ಎಂ.ಎಸ್.ಅವರ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್‌ಗಳಾದ ವಿ.ಎನ್.ಕಡಿ, ಮಲ್ಲಿಕಾರ್ಜುನ ಬಿರಾದಾರ ಹಾಗೂ ಎನ್.ಆರ್.ಖಿಲಾರೆ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ.ನಂದಗಾವಿ ಅವರ ನೇತೃತ್ವದಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.