ಹೊಸಪೇಟೆ ಗ್ರಾಮದ ಸರ್ವೆ ನಂಬರ್ 298/1 ರಲ್ಲಿ 0.14 1/4 ಗುಂಟೆ ಜಮೀನನ್ನು ಖಾತೆ ಮಾಡಲು 7 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಶಿಡ್ಲಘಟ್ಟ: ತಾಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮ ಆಡಳಿತ ಅಧಿಕಾರಿ ಮೋಹನ್ ಕುಮಾರ್ ಎಂಬುವವರು ಜಮೀನಿನ ಖಾತೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದಾಗ ಮಂಗಳವಾರ ಸಂಜೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಹೊಸಪೇಟೆ ಗ್ರಾಮದ ಸರ್ವೆ ನಂಬರ್ 298/1 ರಲ್ಲಿ 0.14 1/4 ಗುಂಟೆ ಜಮೀನನ್ನು ಖಾತೆ ಮಾಡಲು 7 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದನ್ನು ೬.೫೦ ಲಕ್ಷಕ್ಕೆ ವ್ಯವಹಾರ ಕುದುರಿಸಿ ದೂರುದಾರ ವೆಂಕಟಾಪುರ ಬೈರೇಗೌಡ ಅವರು ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರು.

೬.೫೦ ಲಕ್ಷ ಹಣದ ಭಾಗವಾಗಿ ಇಂದು 3 ಲಕ್ಷ ರು.ಗಳ ಹಣವನ್ನು ಪಡೆದುಕೊಳ್ಳುತ್ತಿದ್ದ ವೇಳೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಗ್ರಾಮ ಆಡಳಿತಾಧಿಕಾರಿ ಮೋಹನ್‌ ಕುಮಾರ್‌ನನ್ನು ಹಣದ ಸಮೇತ ವಶಕ್ಕೆ ಪಡೆದು ಕೊಂಡಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ

ಚಿತ್ರ ೧

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ‌ ಆಡಳಿತಾಧಿಕಾರಿ ಮೋಹನ್‌ ಕುಮಾರ್‌