ಸಾರಾಂಶ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ.ಸೋಮಶೇಖರ್ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಶಿಸ್ತುಕ್ರಮ ಜರುಗಿಸಬೇಕು ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ತ ರಾ ವೆಂಕಟೇಶ್ ಒತ್ತಾಯಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯಸಭೆ ಚನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ತ.ರಾ.ವೆಂಕಟೇಶ್ ಒತ್ತಾಯ
ಕನ್ನಡಪ್ರಭ ವಾರ್ತೆ ಹೊಸಕೋಟೆರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ಟಿ ಸೋಮಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಅಡ್ಡಮತದಾನ ಮಾಡಿದ ಹಿನ್ನೆಲೆ ಅವರ ವಿರುದ್ದ ಬಿಜೆಪಿ ಹೈಕಮಾಂಡ್ ಶಿಸ್ತುಕ್ರಮ ಜರುಗಿಸಬೇಕು ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ತ ರಾ ವೆಂಕಟೇಶ್ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಶಾಸಕರಾಗಿ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಪಕ್ಷ ಎಂದರೆ ಒಂದು ರೀತಿ ತಾಯಿ ಇದ್ದಹಾಗೆ. ಆದರೆ ತನು ಬಿಜೆಪಿ ಪಕ್ಷದ ಶಾಸಕ ಎನ್ನುವುದನ್ನು ಮರೆತು ಅಡ್ಡಮತದಾನ ಮಾಡಿ ತಾಯಿಗೆ ಮೋಸ ಮಾಡುವ ಕೆಲಸ ಮಾಡಿದ್ದಾರೆ. ಆದ್ದರಿಂದ ಬಿಜೆಪಿ ಪಕ್ಷದ ಹೈಕಮಾಂಡ್ ಇದನ್ನು ಗಂಬೀರವಾಗಿ ಪರಿಗಣಿಸಿ ಇಂತಹವರಿಗೆ ಶಿಸ್ತು ಕ್ರಮ ಜರುಗಿಸಿ ತಕ್ಕಪಾಠ ಕಲಿಸಬೇಕು ಎಂದರು.ಅಲ್ಲದೆ ಎಸ್‌ಟಿ ಸೋಮಶೇಖರ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಾಗ ಬಿಜೆಪಿ ಪಕ್ಷ ಅವರನ್ನು ಗೌರವವಾಗಿ ನಡೆಸಿಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿ, ಸಚಿವರನ್ನಾಗಿ ಮಾಡಿದ್ದಲ್ಲದೆ, ಮೈಸೂರು ಜಿಲ್ಲೆಯ ಉಸ್ತುವಾರಿಯನ್ನು ಸಹ ನೀಡಿತ್ತು. ಆದರೆ ಇಂದು ಅದನ್ನೆಲ್ಲಾ ಮರೆತಿರುವ ಅವರು ರಾಜ್ಯಸಯಲ್ಲಿ ಅಡ್ಡಮತದಾನ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ಶಿಸ್ತು ಕ್ರಮ ಜರುಗಿಸಿ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ತಂದುಕೊಡುವ ಕೆಲಸ ಮಾಡಬೇಕು ಎಂದರು.