ರೈತರ ಸಾಲಮನ್ನಾ ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ರೈತರ ಸಾಲಮನ್ನಾ ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲು ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.ಮುಖಂಡ ಸಿದ್ಧನಗೌಡ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರ ಅಭಾವದಿಂದ ಎಂದೂ ಕಾಣದ ಭೀಕರ ಬರಗಾಲ ಉಂಟಾಗಿದೆ. ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ರೈತರು ಬಿತ್ತನೆ ಮಾಡಿದ ತೊಗರಿ, ಹತ್ತಿ, ಮೆಕ್ಕೆಜೋಳ, ಸಜ್ಜೆ ಬೆಳೆಗಳು ಸಂಪೂರ್ಣ ನಾಶವಾಗಿವೆ. ಜಿಲ್ಲೆಯ ಬರಪೀಡಿತ ತಾಲೂಕುಗಳಿಗೆ ಸರ್ಕಾರದಿಂದ ಬೆಳೆ ಪರಿಹಾರವಾಗಿ ₹2,500 ಘೋಷಿಸಿದ್ದು, ಪ್ರತಿ ಎಕರೆಗೆ ಕನಿಷ್ಠ ₹25,000 ಪರಿಹಾರ ಕೊಡಬೇಕು. ಜಿಲ್ಲೆಯ ರೈತರ ಕಬ್ಬಿನ ಬೆಳೆ ನಾಶವಾಗಿದ್ದು, ಕಬ್ಬಿಗೆ ವೈಜ್ಞಾನಿಕವಾಗಿ ಒಂದು ಟನ್‌ಗೆ ಕನಿಷ್ಠ ₹6000 ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡರಾದ ಪುಟ್ಟು ಗಡದನ್ನವರ, ಲಾಯಪ್ಪ ಇಂಗಳೆ, ವಿನೋದ ಖೇಡ, ಬಸನಗೌಡ ಧರ್ಮಗೊಂಡ, ಅನೀಲ ಇಕಡೆ, ಸಂಗಾರಡ್ಡಿ, ತೆಗ್ಗಿನಮನಿ, ಶಿವಶರಣರಡ್ಡಿ ಅವರಾದಿ, ಬಸವರಾಜ ಸುತಗುಂಡಿ, ಧರ್ಮಣ್ಣ ಗಬಸಾವಳಗಿ, ಮಹಾದೇವಪ್ಪ ತೇಲಿ ಇದ್ದರು.