ಜಮೀರ್ ಅಹಮದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

ಕನ್ನಡಪ್ರಭ ವಾರ್ತೆ ಗೌರಿಬಿದನೂರುರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ದಶಕಗಳಿಂದ ನಡೆಯುತ್ತಿರುವ ಅನ್ಯಾಯಗಳನ್ನು ಸರಿಪಡಿಸಬೇಕು ಹಾಗೂ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಾಮಿಯಾ ಮಸೀದಿ ಸಮಿತಿಯ ಕಾರ್ಯದರ್ಶಿ ಡಾ.ನಯಾಜ್ ಆಗ್ರಹಿಸಿದರು.ತಾಲೂಕಿನ ಹೊಸೂರು ಗ್ರಾಮದ ಜಾಮಿಯಾ ಮಸೀದಿ ಆವರಣದಲ್ಲಿ ಮುಸ್ಲಿಂ ಸಮುದಾಯದ ಜಮೀರ್ ಅಹಮದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ರಾಜಕೀಯ ಮತ್ತು ಆಡಳಿತಾತ್ಮಕ ಅಧಿಕಾರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಮುದಾಯದ ಆಶಯದಂತೆ ರಾಜ್ಯ ಸಚಿವ ಸಂಪುಟದಲ್ಲಿ ಕನಿಷ್ಠ ನಾಲ್ಕರಿಂದ 5 ಸ್ಥಾನಗಳನ್ನು ಮುಸ್ಲಿಂ ಸಮುದಾಯಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಿದರು.ಜಾಮಿಯಾ ಮಸೀದಿ ಸಮಿತಿಯ ಖಜಾಂಚಿ ಆಸೀಫ್ ಮಾತನಾಡಿ, ಶೇ. 90 ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್‌ಗೆ ಹೋಗುತ್ತಿವೆ. ಅಂತಹ ಸಮುದಾಯವನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಇಮ್ರಾನ್, ಜಾಮಿಯಾ ಮಸೀದಿಯ ಸಮಿತಿಯ ಅಧ್ಯಕ್ಷ ಷಪಿಸಾಬ್, ಉಪಾಧ್ಯಕ್ಷ ಅಬ್ದುಲ್ಲಾ ಹಮೀದ್ ಹಾಗೂ ಪದಾಧಿಕಾರಿಗಳು ಮತ್ತು ಸ್ಥಳೀಯ ಮುಸ್ಲಿಂ ಮುಖಂಡರಾದ ಸಿರಾಜ್, ಮಹಬೂಬ್, ರಹಮತ್, ಅನ್ಸಾರ್, ಸಾದತ್ ಇದ್ದರು.

ನಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಸಂಘಟಿತರಾಗಿದ್ದು, ಮುಂಬರುವ 2028 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಲೇ ಸಮುದಾಯದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಸಮಿತಿಯ ಅಧ್ಯಕ್ಷ ಷಪಿಸಾಬ್, ಉಪಾಧ್ಯಕ್ಷ ಅಬ್ದುಲ್ಲಾ ಹಮೀದ್ ಹಾಗೂ ಪದಾಧಿಕಾರಿಗಳು ಮತ್ತು ಸ್ಥಳೀಯ ಮುಸ್ಲಿಂ ಮುಖಂಡರಾದ ಸಿರಾಜ್, ಮಹಬೂಬ್, ರಹಮತ್, ಅನ್ಸಾರ್, ಸಾದತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.