ಸಾರಾಂಶ
ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ
ಕನ್ನಡಪ್ರಭ ವಾರ್ತೆ ಕೊಪ್ಪಳಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬುಧವಾರ ಮನವಿ ಸಲ್ಲಿಸಿ ಕರ್ನಾಟಕದ ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಮತ್ತು ಮುಡಾದಲ್ಲಿ ನಡೆದ ನಿವೇಶನ ಹಂಚಿಕೆಗಳ ಅವ್ಯವಹಾರ ಸಮಗ್ರವಾದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಇದಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಪೂರ್ಣ ಬೆಂಬಲವಿದೆ. ಆದರೆ, ರಾಜ್ಯಪಾಲರಾದ ತಾವರ್ ಚಂದ್ ಗೆಹಲೋತ್ ಅವರು ದೂರುದಾರ ಟಿ.ಜೆ. ಅಬ್ರಾಹಂ ಅವರ ಅರ್ಜಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ಸರಿಯಾದ ಕ್ರಮವಲ್ಲ. ಟಿ.ಜೆ. ಅಬ್ರಾಹಂಕೊಟ್ಟ ದೂರಿಗೆ ಸಂಬಂಧಿಸಿ, ಸ್ಥಳೀಯ ನ್ಯಾಯಾಲಯವಾಗಲೀ, ಇತರೆ ಯಾವುದೇ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ತನಿಖೆ ಕೂಡ ನಡೆಸಿಲ್ಲ. ಖಾಸಗಿ ದೂರಿನ ನೆಪದಲ್ಲಿ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವುದು ಖಂಡನೀಯ ಎಂದಿದ್ದಾರೆ.ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು. ಕರ್ನಾಟಕ ರೈತ ಸಂಘ (ಎಐಕೆಕೆಎಸ್) ರಾಜ್ಯಾಧ್ಯಕ್ಷ ಡಿ.ಹೆಚ್. ಪೂಜಾರ, ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಎಐಟಿಯುಸಿ)ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ್. ಟಿಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಬಿ. ಗೋನಾಳ. ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ನರೇಗಲ್. ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್. ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ತುಕಾರಾಮ್ ಬಿ. ಪಾತ್ರೋಟಿ. ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಾಫರ್ ಕುರಿ. ನಾಗರಾಜ್ ಭೋವಿ ಹಿರೇ ಬಗನಾಳ. ಸಾಧಿಕ್ ಅಲಿ ದಫೆದಾರ್. ಸಫಾಯಿ ಕರ್ಮಚಾರಿ ನಾಮ ನಿರ್ದೇಶಿತ ಸದಸ್ಯ ಕಾಶಪ್ಪ ಚಲವಾದಿ, ಅಲೆಮಾರಿ ಸಂಘಟನೆ ಜಿಲ್ಲಾ ಅಧ್ಯಕ್ಷ ಸಂಜಯ್ ದಾಸ್ ಕೌಜಗೇರಿ, ರಾಮಲಿಂಗಯ್ಯ ಶಾಸ್ತ್ರಿ ಮಠ, ನಿಂಗು ಜಿ. ಬೆಣಕಲ್ ಮುಂತಾದವರು ಭಾಗವಹಿಸಿದ್ದರು.