ಗೌರಿಬಿದನೂರು ತಾಲೂಕಿನಲ್ಲಿ 237 ಶಿಕ್ಷಕರ ನೇಮಕಾತಿ ಮಾಡಬೇಕಿದೆ. ಈಗಾಗಲೇ ಪೋಷಕರು ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲವೆಂಬ ಕಾರಣಕ್ಕೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ, ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಲಿದೆ, ಆದ್ದರಿಂದ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ತಾಲೂಕು ಆಂಧ್ರದ ಗಡಿಭಾಗಕ್ಕೆ ಹೊಂದಿಕೊಂಡಿದ್ದು, ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಲು ಹಾಗೂ 267 ಶಾಲೆಗಳ ಕೊಠಡಿಗಳು ದುಸ್ಥಿತಿಯಲ್ಲವೇ, ಅಲ್ಲದೆ ಇವುಗಳಲ್ಲಿ 120 ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿವೆ. ಇವುಗಳ ದುರಸ್ತಿಗೆ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪರರಿಗೆ ಶಾಸಕ ಕೆ.ಎಚ್‌.ಪುಟ್ಟಸ್ವಾಮಿಗೌಡ ಮನವಿ ಮಾಡಿದರು. ಸರಕಾರಿ ಕನ್ನಡ ಶಾಲೆಗಳಿಗೆ ಶಿಕ್ಷಕರು, ಕೊಠಡಿಗಳು, ಮೂಲಸೌಕರ್ಯ, ಕೊರತೆಯಿಂದ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾವಾಗುತ್ತಿದೆ. ಶಾಲೆಗಳಿಗೆ ಕೊಠಡಿ ನಿರ್ಮಾಣ ಮತ್ತು ಶಿಕ್ಷಕರ ನೇಮಕಾತಿ ಮಾಡಬೇಕು. ತಾಲೂಕಿನಲ್ಲಿ 295 ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 1,637 ಕೊಠಡಿಗಳಿವೆ. ಇವುಗಳಲ್ಲಿ 267 ಕೊಠಡಿಗಳ ದುರಸ್ತಿ ಮಾಡಬೇಕಿದೆ ಎಂದರು.

ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ

ಜೊತೆಗೆ ತಾಲೂಕಿನಲ್ಲಿ 237 ಶಿಕ್ಷಕರ ನೇಮಕಾತಿ ಮಾಡಬೇಕಿದೆ. ಈಗಾಗಲೇ ಪೋಷಕರು ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲವೆಂಬ ಕಾರನಕ್ಕೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ, ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಲಿದೆ, ಆದ್ದರಿಂದ ಶಿಕ್ಷಣ ಸಚಿವರು ಗಡಿಭಾಗದ ಗೌರಿಬಿದನೂರು ತಾಲೂಕಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

2 ಕರ್ನಾಟಕ ಪಬ್ಲಿಕ್ ಶಾಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಮಧುಬಂಗಾರಪ್ಪ ಉತ್ತರಿಸಿ, ಈಗಾಗಲೇ ರಾಜ್ಯದ ಎಲ್ಲ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಗಡಿ ಭಾಗದ ಗೌರಿಬಿದನೂರಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ಮತ್ತು ಗೌರಿಬಿದನೂರು ತಾಲೂಕಿಗೆ 2 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸಹ ಮಂಜೂರುಮಾಡಿಲಾಗದೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ ಗೌರಿಬಿದನೂರು ತಾಲೂಕಿನ ಶಾಲೆಗಳಿಗೆ ಹೆಚ್ಚಿನ ಅನುದಾನ ಹಾಗೂ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಸದ್ಯದಲ್ಲಿ ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.