7ನೇ ವೇತನ ಆಯೋಗ ಜಾರಿಗೆ ಆಗ್ರಹ: ನಿವೃತ್ತ ನೌಕರರ ಪ್ರತಿಭಟನೆ

| Published : Oct 02 2024, 01:10 AM IST

7ನೇ ವೇತನ ಆಯೋಗ ಜಾರಿಗೆ ಆಗ್ರಹ: ನಿವೃತ್ತ ನೌಕರರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, 2022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಿವೃತ್ತ ನೌಕರರ ವೇದಿಕೆ ನೇತೃತ್ವದಲ್ಲಿ ಆಜಾದ್ ಪಾರ್ಕ್ ವೃತದ ಬಳಿ ಕಪ್ಪು ಪಟ್ಟಿ ಧರಿಸಿ ಧರಣಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

2022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಿವೃತ್ತ ನೌಕರರ ವೇದಿಕೆ ನೇತೃತ್ವದಲ್ಲಿ ಆಜಾದ್ ಪಾರ್ಕ್ ವೃತದ ಬಳಿ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದ ನಿವೃತ್ತ ನೌಕರರು ರಾಜ್ಯ ಸರ್ಕಾರ ತಾರತಮ್ಯ ನೀತಿ ಕೈ ಬಿಡಬೇಕು ಎಂದು ಆಗ್ರಹಿಸಿದರು.

01-07-2022 ರಿಂದ 31-07-2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ಒದಗಿಸದೇ, 6ನೇ ವೇತನ ಆಯೋಗದ ಅನುಸಾರ ನೀಡಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದರು.

7ನೇ ವೇತನ ಆಯೋಗದ ಅನುಸಾರ ತಮಗೂ ಉಪಧಾನ, ಪರಿವರ್ತನೆ ಮತ್ತು ಗಳಿಕೆ ರಜೆ ಮೊತ್ತವನ್ನು ನಗದು ರೂಪದಲ್ಲಿ ನೀಡಬೇಕು ಎಂದು ಆಗ್ರಹಿಸಿದರು.ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಿ ಸರ್ಕಾರಕ್ಕೆ ಭಿನ್ನವತ್ತಳೆ ಅರ್ಪಿಸಲಾಗಿದೆ. ಮೈಸೂರಿನಲ್ಲೂ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಉಪಯೋಗವಾಗಿಲ್ಲ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ನೌಕರರು ಕೂಡಲೇ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ನಿವೃತ್ತ ನೌಕರರ ಬೇಡಿಕೆ ಈಡೇರಿಸುವಂತೆ ತಾವು ಈಗಾಗಲೇ ರಾಜ್ಯ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚೆ ನಡೆಸಿದ್ದು ಮುಂದಿನ ಅಧಿವೇಶನ ದಲ್ಲೂ ವಿಷಯ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದರು.ನಿವೃತ್ತ ನೌಕರರ ವೇದಿಕೆ ಅಧ್ಯಕ್ಷ ಕೆ.ಆರ್.ಪ್ರಭಾಕರ್, ಗೌರವಾಧ್ಯಕ್ಷ ಬಿ.ಎಲ್. ಶರಶ್ಚಂದ್ರ, ಕಾರ್ಯದರ್ಶಿ ಕೆ.ಎನ್. ಮಂಜುನಾಥ್‌ ಭಟ್, ಕೆಂಪಸಿದ್ದಯ್ಯ, ನಾಗರಾಜ್. ಶೇಷಾದ್ರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

1 ಕೆಸಿಕೆಎಂ 32022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ಚಿಕ್ಕಮಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.