ಜಾತಿ ಗಣತಿ ಸಮೀಕ್ಷಾ ವರದಿ ಜಾರಿಗೊಳಿಸಲು ಆಗ್ರಹ

| Published : Oct 20 2024, 01:57 AM IST

ಸಾರಾಂಶ

ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ವರದಿ ಜಾರಿಯಾಗಲಿ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಜಾತಿ ಗಣತಿ ಸಮೀಕ್ಷಾ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರ ತಾಲೂಕು ಕುರುಬರ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.ಸಂಘದ ತಾಲೂಕು ಅಧ್ಯಕ್ಷ ಎಂ. ಆನಂದ್ ಮಾತನಾಡಿ, ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಎಚ್. ಕಾಂತರಾಜು ಅವರ ಜಾತಿ ಗಣತಿ ವರದಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸ್ವಾಗತಾರ್ಹ ಎಂದರು.

ಸಾಮಾಜಿಕ ನ್ಯಾಯದ ಪರ

ಹೀಗೆ ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಳಿಗೆ ಅವರ ಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸುತ್ತಿಲ್ಲ ಎಂದರು.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ ಎಂದು ತಿಳಿಸಿದರು.23ಕ್ಕೆ ಹಕ್ಕೊತ್ತಾಯ ಸಮಾವೇಶ

ಗೌರವ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಅಕ್ಟೋಬರ್ 25 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ ಅಕ್ಟೋಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕುರುಬರ ಸಂಘದ ಖಜಾಂಚಿ ಎಂ.ಲಕ್ಷ್ಮಯ್ಯ, ಕಾರ್ಯದರ್ಶಿ ಎನ್ ಸುರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಸಿ.ಪ್ರಕಾಶ್, ಮುಖಂಡರಾದ ವೆಂಕಟರಮಣಪ್ಪ, ಮಿಲ್ಟ್ರಿ ಹೋಟೆಲ್ ಮಂಜುನಾಥ್, ರಾಮಾಂಜಿನಪ್ಪ, ಶ್ರೀನಿವಾಸ್, ನರೇಂದ್ರ, ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್,ಪದಾಧಿಕಾರಿಗಳು ಮತ್ತು ಮುಖಂಡರು ಇದ್ದರು.