ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

| Published : Dec 11 2023, 01:15 AM IST

ಸಾರಾಂಶ

ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಅವರ ಮೇಲೆ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಗುರುವಾರ ಕಲಬುರಗಿಯಲ್ಲಿ ವಕೀಲ ಈರಣ್ಣ ಮಾಲಿಪಾಟೀಲ್ ಅವರ ಮೇಲೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ವಕೀಲರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಭಯದ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ‘ವಕೀಲರ ಹಿತ ರಕ್ಷಣಾ ಕಾಯ್ದೆ’ಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಸಂಡೂರು

ವಕೀಲರ ಮೇಲೆ ಆಗುವ ದೌರ್ಜನ್ಯವನ್ನು ತಡೆಯುವ ಸಲುವಾಗಿ ‘ವಕೀಲರ ಹಿತರಕ್ಷಣಾ ಕಾಯ್ದೆ’ಯನ್ನು ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ತಹಸೀಲ್ದಾರ್ ಜಿ. ಅನಿಲ್ ಕುಮಾರ್ ಅವರ ಮುಖಾಂತರ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿಪತ್ರ ಸಲ್ಲಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಬಿ. ವಿಜಯಕುಮಾರ್, ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಅವರ ಮೇಲೆ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಗುರುವಾರ ಕಲಬುರಗಿಯಲ್ಲಿ ವಕೀಲ ಈರಣ್ಣ ಮಾಲಿಪಾಟೀಲ್ ಅವರ ಮೇಲೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ವಕೀಲರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಭಯದ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ‘ವಕೀಲರ ಹಿತ ರಕ್ಷಣಾ ಕಾಯ್ದೆ’ಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಂಘದ ಉಪಾಧ್ಯಕ್ಷ ಕೆ. ಕುಮಾರಸ್ವಾಮಿ, ಕಾರ್ಯದರ್ಶಿ ಎನ್.ಎಂ. ನಟರಾಜಶರ್ಮ, ಜಂಟಿ ಕಾರ್ಯದರ್ಶಿ ಸಿ. ರಾಮಾನಾಯ್ಕ್, ಖಜಾಂಚಿ ಉಮರ್ ಫಾರುಕ್, ಲೈಬ್ರೇರಿಯನ್ ಎಂ. ಅಂಜಿನಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ವಿ. ನಾಗರಾಜ, ಎಚ್. ನಾಗರಾಜ, ಟಿ. ಯರಿಸ್ವಾಮಿ, ಕೆ. ಹುಚ್ಚಪ್ಪ, ಎಚ್ ಭರ್ಮರೆಡ್ಡಿ, ಸದಸ್ಯರಾದ ವಿಜಯಕುಮಾರ್, ಟಿ.ಎಂ. ಶಿವಕುಮಾರ್, ಆರ್. ಬಸವರಾಜ್, ಅಂಜಿನಿ, ಬಾಬುಸಾಬ್, ಆರ್.ವಿ. ವಿಷ್ಣು, ಭುವನೇಶ್‌ ಮೇಟಿ, ಮಂಜುನಾಥಗೌಡ, ಅರಳಿ ಮಲ್ಲಪ್ಪ, ಮಯೂರ್ ಮುಂತಾದವರು ಉಪಸ್ಥಿತರಿದ್ದರು.