ಸಾರಾಂಶ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ.
- ಧಾರವಾಡ ಗ್ರಾಮೀಣ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಧಾರವಾಡಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಕೋವಿಡ್ ಸಂದರ್ಭದಲ್ಲಿನ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಧಾರವಾಡ ಗ್ರಾಮೀಣ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿತು.
ಕೋವಿಡ್ ನಿರ್ವಹಣೆ ಸಂದರ್ಭದಲ್ಲಿ ಬಿಜೆಪಿ ಆಡಳಿತದಲ್ಲಿತ್ತು. ಆಗ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಕುರಿತು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಹಿರಂಗವಾಗಿ ಆರೋಪ ಮಾಡಿದ್ದಾರೆ. ಆದ್ದರಿಂದ ಅವ್ಯವಹಾರ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿರುವ ಸಚಿವರ, ಶಾಸಕರ ಮತ್ತು ಅಧಿಕಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದ ಮನವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಶಿವಳ್ಳಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಸುರೇಶಗೌಡ ಕರಿಗೌಡ್ರ, ಅರವಿಂದ ಏಗನಗೌಡರ, ಮುಖಂಡರಾದ ಮಲ್ಲನಗೌಡ ಪಾಟೀಲ, ಸಿದ್ದಪ್ಪ ಪ್ಯಾಟಿ, ಪಾಶ್ವ೯ನಾಥ ಪತ್ರಾವಳಿ, ಸಿದ್ದಪ್ಪ ಸಪ್ಪೂರಿ, ಮಡಿವಾಳಪ್ಪ ಉಳವಣ್ಣವರ, ಚನ್ನಬಸಪ್ಪ ಮಟ್ಟಿ, ಇಮ್ರಾನ ಕಳ್ಳಿಮನಿ, ಅಶೋಕ ದೊಡ್ಡಮನಿ, ನೇತಾಜಿ ಪಾಟೀಲ, ಮಡಿವಾಳಪ್ಪ ದಿಂಡಲಕೊಪ್ಪ, ಆತ್ಮಾನಂದ ಅಂಗಡಿ, ಪರಮೇಶ್ವರ ಕಾಳೆ, ಭೀಮಪ್ಪ ಕಾಸಾಯಿ, ವೆಂಕಟೇಶ ಸಗಬಾಲ, ಆನಂದ ಸಿಂಗನಾಥ, ಕರೆಪ್ಪ ಮಾದರ, ಬಸವರಾಜ ಜಾಧವ, ಹನಮಂತ ಮಾರಡಗಿ, ಪ್ರಕಾಶ ದೊಡವಾಡ ಇದ್ದರು.