ಸಾರಾಂಶ
ಚಿಕ್ಕಮಗಳೂರು, ಕ್ರಿಕೆಟ್ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ಹಾಗೂ ಕ್ರೀಡಾಕೂಟ ಹಮ್ಮಿಕೊಳ್ಳಲು ತಾಲೂಕಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳಾವಕಾಶ ಕಲ್ಪಿಸಿಕೊಡುವಂತೆ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಜಿಲ್ಲಾಡಳಿತಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕ್ರಿಕೆಟ್ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ಹಾಗೂ ಕ್ರೀಡಾಕೂಟ ಹಮ್ಮಿಕೊಳ್ಳಲು ತಾಲೂಕಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳಾವಕಾಶ ಕಲ್ಪಿಸಿಕೊಡುವಂತೆ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರನ್ನು ಭೇಟಿ ಮಾಡಿದ ಅವರು, ತಾಲೂಕಿನಲ್ಲಿ ಲೆದರ್‌ಬಾಲ್ ಕ್ರಿಕೆಟ್ ಕ್ರೀಡಾಂಗಣಕ್ಕೆ ಸ್ಥಳಾವಕಾಶದ ಕೊರತೆಯಿದೆ. ಹೀಗಾಗಿ ಜಿಲ್ಲಾಡಳಿತ ಕನಿಷ್ಠ 8 ಎಕರೆ ಭೂಮಿ ನೀಡಿದರೆ ಲೆದರ್ ಬಾಲ್ ಕ್ರೀಡಾಪಟುಗಳಿಗೆ ತರಬೇತಿ ಹಾಗೂ ಆಟೋಟಕ್ಕೆ ಅನುಕೂಲವಾಗಲಿದೆ ಎಂದರು.ಜಿಲ್ಲೆಯಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳು ಸಮರ್ಪಕ ಕ್ರೀಡಾಂಗಣವಿಲ್ಲದೇ ಅವಕಾಶದಿಂದ ವಂಚಿತ ರಾಗಬಾರದೆಂಬ ದೃಷ್ಟಿಯಿಂದ ಕ್ರಿಕೆಟ್ ಮೈದಾನ ನಿರ್ಮಿಸುವ ಉದ್ದೇಶವಿದೆ. ಅಲ್ಲದೇ ಸಾರ್ವಜನಿಕರಿಗೆ ವಾಕಿಂಗ್‌ಗೆ ಅಲ್ಲೇ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಶಿವಮೊಗ್ಗ ವಲಯ ಸಂಚಾಲಕ ಸದಾನಂದ, ನಿಕಟಪೂರ್ವ ವಲಯ ಸಂಚಾಲಕ ಡಿ.ಆರ್. ನಾಗರಾಜ್, ಶಿವಮೊಗ್ಗ ವಲಯ ಸಮಿತಿ ಸದಸ್ಯರಾದ ಹರೀಶ್, ಅಶೋಕ್, ಚಿಕ್ಕಮಗಳೂರು ಕ್ರಿಕೆಟ್ ಕ್ಲಬ್‌ನ ಕಾರ್ಯದರ್ಶಿ ಶಶಿಕುಮಾರ್, ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್‌ನ ಸೈಯದ್ ಅಲಿಂ, ಸ್ಥಳಿಯ ವಲಯ ಸಂಚಾಲಕ ರಾಣಾ ಸ್ಪೋರ್ಟ್ಸ್ ಕ್ಲಬ್‌ನ ಹರೀಶ್ ಇದ್ದರು.13 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರನ್ನು ಭೇಟಿ ಮಾಡಿದ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ತಂಡ ಚಿಕ್ಕಮಗಳೂರು ತಾಲೂಕಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಜಾಗ ನೀಡಲು ಮನವಿ ಮಾಡಿತು.