ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

| Published : Feb 24 2025, 12:30 AM IST

ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

Demand for legal action against Marathi hooligans

-ಕರುನಾಡ ವಿಜಯಸೇನೆಯಿಂದ ಕೆಎಸ್ ಆರ್‌ಟಿ ನಿಲ್ದಾಣದಲ್ಲಿ ಪ್ರತಿಭಟನೆ

----

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಕನ್ನಡದಲ್ಲಿ ಮಾತನಾಡಿದ್ದಕ್ಕೆ ಬೆಳಗಾವಿಯಲ್ಲಿ ಮರಾಠಿ ಪುಂಡರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಂಡಕ್ಟರ್ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ ರಸ್ತೆ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಮಹದೇವನ ಮೇಲೆ ಹಾಕಿರುವ ಪೋಕ್ಸೊ ಕೇಸ್‌ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ಬಸ್ ಕಂಡಕ್ಟರ್ ಮರಾಠಿಯಲ್ಲಿ ಮಾತನಾಡಲಿಲ್ಲ ಎನ್ನುವ ಕಾರಣಕ್ಕಾಗಿ ಮರಾಠಿಗರು ನಡೆಸಿರುವ ಹಲ್ಲೆಯಿಂದ ಬೆಳಗಾವಿ ಪೊಲೀಸರಿಗೂ ಗಾಯಗಳಾಗಿವೆ. ಮತ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ ಕೆಲವು ಸಮುದಾಯದವರನ್ನು ಓಲೈಸುವ ಬುದ್ಧಿವಂತಿಕೆ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

ಗೃಹ ಸಚಿವರು ಪೊಲೀಸರ ಮೂಲಕ ಕನ್ನಡಿಗರ ಮೇಲೆ ಮನಬಂದಂತೆ ಕೇಸು ಹಾಕಿಸುತ್ತಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ವೇಳೆ ಮಾತನಾಡಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಬಸ್ ಕಂಡಕ್ಟರ್ ಮಹದೇವನ ಮೇಲೆ ಹಾಕಿರುವ ಪೋಕ್ಸೋ ಕೇಸನ್ನು ರದ್ದುಪಡಿಸಿ ಹಲ್ಲೆ ನಡೆಸಿರುವ ಮರಾಠಿಗರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗವುದೆಂದರು.

ವಿಜಯಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ನಿಸಾರ್ ಅಹಮದ್, ಅಖಿಲೇಶ್, ಅವಿನಾಶ್, ಮುಜಾಹಿದ್, ಯರ್ರಿಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

--------------

ಪೋಟೋ: ಮರಾಠಿ ಪುಂಡರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.

------------

ಫೋಟೋ: 23 ಸಿಟಿಡಿ6ಚಿತ್ರದುರ್ಗ ಪೋಟೋ ಸುದ್ದಿ111