ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವ್ಹಾಣ ಮಾತನಾಡಿ, ರಾಜ್ಯಾದ್ಯಂತ ಹಾಗೂ ವಿಧಾನಸೌಧದಲ್ಲಿಯೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿವೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವು ಸಚಿವ ಬಿ. ನಾಗೇಂದ್ರ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತವರ ಪರವಾಗಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಸಂದೇಶ ನೀಡಿದ್ದಾರಾ ಎಂಬ ಅನುಮಾನ ಜನರನ್ನು ಕಾಡುತ್ತಿವೆ ಎಂದರು.
ಗಜೇಂದ್ರಗಡ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರೋಣ ಬಿಜೆಪಿ ಮಂಡಲ ವತಿಯಿಂದ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವ್ಹಾಣ ಮಾತನಾಡಿ, ರಾಜ್ಯಾದ್ಯಂತ ಹಾಗೂ ವಿಧಾನಸೌಧದಲ್ಲಿಯೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿವೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವು ಸಚಿವ ಬಿ. ನಾಗೇಂದ್ರ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತವರ ಪರವಾಗಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಸಂದೇಶ ನೀಡಿದ್ದಾರಾ ಎಂಬ ಅನುಮಾನ ಜನರನ್ನು ಕಾಡುತ್ತಿವೆ.ಹೀಗಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಂದಾಜು ₹೧೮೭ ಕೋಟಿ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಸಿಎಂ ಡಿ.ಕೆ. ಶಿವಕುಮಾರ ತಕ್ಷಣ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಮುಂದಾಗದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
ಮುಖಂಡರಾದ ಡಿ.ಜಿ. ಕಟ್ಟಿಮನಿ, ಶಿವಕುಮಾರ ಜಾಧವ, ಸಂತೋಷ ಕಡಿವಾಳರ, ಉಮೇಶ ಮಲ್ಲಾಪೂರ ಮಾತನಾಡಿದರು. ಇದಕ್ಕೂ ಮುನ್ನ ಮಾಜಿ ಸಚಿವ ಕಳಕಪ್ಪ ಬಂಡಿ ನಿವಾಸದಿಂದ ಸಚಿವ ಬಿ. ನಾಗೇಂದ್ರ ರಾಜೀನಾಮಗೆ ಆಗ್ರಹಿಸಿ ಪ್ರತಿಭಟನಾ ರ‍್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಈ ವೇಳೆ ಮುಖಂಡರಾದ ಅಶೋಕ ವನ್ನಾಲ, ಕರಣ ಬಂಡಿ, ಮುತ್ತಣ್ಣ ಕಡಗದ, ರಾಜೇಂದ್ರ ಘೋರ್ಪಡೆ, ಬಸವರಾಜ ಬಂಕದ, ಮುದಿಯಪ್ಪ ಕರಡಿ, ಹನುಮಂತಪ್ಪ ಹಟ್ಟಿಮನಿ, ಮಹಾಂತೇಶ ಪೂಜಾರ, ಪರಶುರಾಮ ಚಿಲ್‌ಝರಿ, ಸೂಗಿರೇಶ ಕಾಜಗಾರ, ಬಾಳು ಬೋಸಲೆ, ಕಿರಣ ರಾರೋಡ, ಸಂಜೀವಪ್ಪ ಲೆಕ್ಕಿಹಾಳ, ಮಂಜುನಾಥ ಬೆನಕನವಾರಿ ಸೇರಿ ಇತರರು ಇದ್ದರು.