ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಜೆಪಿ ಸಿಂದಗಿ ಮತಕ್ಷೇತ್ರದ ಮಂಡಲದ ವತಿಯಿಂದ ನಗರದಲ್ಲಿ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ. ಬಿಜೆಪಿ ಕಾರ್ಯಕರ್ತರು ಕೆಲ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಧರಣಿ ನಿರತ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ರವರು ಆಗಮಿಸಿ ಮನವಿ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಂಸದ ರಮೇಶ ಜಿಗಜಿಣಗಿ ಅವರ ನೇತೃತ್ವ ವಹಿಸಿ ಮಾತನಾಡಿ, ತಾನು ಎಸ್‌ಟಿ ಎಂಬ ಕಾರಣಕ್ಕೆ ಬಿಜೆಪಿಗರು ಹೋರಾಟ ಮಾಡುತ್ತಿದ್ದಾರೆಂದು ಆರೋಪಿಸುವ ಸಚಿವ ನಾಗೇಂದ್ರನಿಗೆ ಅದೇ ಸಮುದಾಯದ ಅನುದಾನ ದುರ್ಬಳಕೆ ಮಾಡಿಕೊಳ್ಳುವಾಗ ಕಾಳಜಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿಯಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿತ್ತು. ಆದರೆ, ವಿಧಾನ ಮಂಡಲ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಚರ್ಚೆಯಾಗದ ಕಾರಣ ಹೋರಾಟ ಕೈಬಿಟ್ಟು ಬರದ ಕುರಿತು ಚರ್ಚಿಸಲು ರಾಜ್ಯ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ತನ್ನಿಮಿತ್ತ ಹೋರಾಟ ಕೈಬಿಡಲಾಗುತ್ತಿದೆ ಎಂದು ಹೇಳಿದರು.

ಮಾಜಿ ಶಾಸಕ ರಮೇಶ ಭೂಸನೂರ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿದರು. ಈ ವೇಳೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಉಮೇಶ ಕಾರಜೋಳ, ಸಂಜೀವ ಐಹೊಳ್ಳಿ, ಈರಣ್ಣ ರಾವೂರ, ಮಳುಗೌಡ ಪಾಟೀಲ, ಸ್ವಪ್ನಾ ಕಣಮುಚನಾಳ, ವಿಜಯ ಜೋಶಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.