ಸಾರಾಂಶ
ನಮ್ಮ ಕರ್ನಾಟಕ ಸೇನೆ ಜಿಲ್ಲಾ ಸಮಿತಿಯಿಂದ ಶಿರಸ್ತೇದಾರ ರಂಗರಾಜು ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚಾಮರಾಜನಗರ: ಆನ್‌ಲೈನ್ ಬೆಟ್ಟಿಂಗ್ ಮತ್ತು ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯುವಂತೆ ಹಾಗೂ ಆನ್‌ಲೈನ್ ಬೆಟ್ಟಿಂಗ್ ಗೇಮ್ ವೆಬ್ಸೈಟ್‌ಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದಲ್ಲಿ ಶಿರಸ್ತೇದಾರ ರಂಗರಾಜು ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸುಮಾರು ದಿನಗಳಿಂದ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಆಗುತ್ತಿರುವ ಅನಾಹುತಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು, ಇದನ್ನು ಚಟವಾಗಿಸಿಕೊಂಡಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಇದರಿಂದ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗಾಗಲೇ ಕಮರ್ಷಿಯಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವೆಬ್‌ಸೈಟ್ ನೆಡೆಸುತ್ತಿದ್ದ ಇಬ್ಬರು ಬುಕ್ಕಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಲು ಹಾಗೂ ಈ ರೀತಿಯಾಗಿ ಮೋಸ ಮಾಡುವ ಉದ್ದೇಶದಿಂದಲೇ, ಜನರನ್ನು ವಂಚಿಸುತ್ತಿರುವ ಆನ್‌ಲೈನ್ ಬೆಟ್ಟಿಂಗ್, ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಬೇಕು ಎಂದು ಮನವಿಯಲ್ಲಿ ಸುರೇಶ್ ನಾಯಕ್ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಉಸ್ಮಾನ್ ಜಿಲ್ಲಾ ಉಪಾಧ್ಯಕ್ಷ ನಾಗರಾಜು, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶ್ರೀನಿವಾಸನಾಯಕ, ತಾಲೂಕು ಉಪಾಧ್ಯಕ್ಷ ಪ್ರವೀಣ್ ಆಟೋ ಘಟಕ ಅಧ್ಯಕ್ಷ ಶಂಕರ, ಅಣ್ಣೂರು ಗ್ರಾಮ ಘಟಕ ಅಧ್ಯಕ್ಷ ಮಾದೇವಸ್ವಾಮಿ, ತೆರಕಣಾಂಬಿ ಹೋಬಳಿ ಘಟಕದ ಅಧ್ಯಕ್ಷ ಚಂದ್ರು, ಕಾರ್ಯದರ್ಶಿ ಬಂಗಾರಸ್ವಾಮಿ, ಶಿವಕುಮಾರ್, ಜಗದೀಶ್,ಚಂದ್ರಶೇಖರ್,ರಾಜು, ದೊರೆಸ್ವಾಮಿ, ಬೆಳ್ಳಿನಾಗ, ರಾಜಣ್ಣ, ನಾಗೇಂದ್ರ, ಚಂದ್ರು ಹಾಜರಿದ್ದರು.