ತಾಲೂಕು ಕೇಂದ್ರದಲ್ಲಿ ಸರ್ಕಾರಿ ಕಚೇರಿಗಳ ಆರಂಭಕ್ಕೆ ಆಗ್ರಹ

| Published : Dec 21 2024, 01:19 AM IST

ಸಾರಾಂಶ

Demand for opening of government offices at taluk centers

-ವಡಗೇರಾದಲ್ಲಿ ಸಾಮಾಜಿಕ ಹೋರಾಟಗಾರರಿಂದ ವಿಧಾನ ಸಭಾಪತಿ ಯು.ಟಿ.ಖಾದರ್ ಅವರಿಗೆ ಮನವಿ

----

ಕನ್ನಡಪ್ರಭ ವಾರ್ತೆ ವಡಗೇರಾ

ವಡಗೇರಾ ತಾಲೂಕು ಕೇಂದ್ರದಲ್ಲಿ ಸರ್ಕಾರಿ ಕಚೇರಿಗಳ ಆರಂಭ ಹಾಗೂ ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಕುರಿತು ಸರ್ಕಾರದ ಗಮನಕ್ಕೆ ತರುವಂತೆ ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೂಲಕ ಮುಖ್ಯಮಂತ್ರಿಗಳಿಗೆ ಸಾಮಾಜಿಕ ಹೋರಾಟಗಾರರಾದ ನಿಂಗಣ್ಣ ಜಡಿ ಮತ್ತು ಫಯಾಜ್ ಬಿ. ನಾಯ್ಕೋಡಿ ಅವರು ಮನವಿ ಸಲ್ಲಿಸಿದರು.

ಈಗಾಗಲೇ ತಾಲೂಕು ಕೇಂದ್ರ ಎಂದು ಘೋಷಣೆಯಾಗಿ ಹಲವು ವರ್ಷಗಳೇ ಕಳೆದಿವೆ. ಆದರೂ ಇಲ್ಲಿಯವರೆಗೆ ತಾಲೂಕಿಗೆ ಸಂಬಂಧಿಸಿದ ಪ್ರಮುಖ ಕಚೇರಿಗಳನ್ನು ಆರಂಭಿಸಿಲ್ಲ. ಇದರಿಂದ ತಾಲೂಕಿನ ಕೊನೆ ಭಾಗದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಆದ ಕಾರಣ ತಾವುಗಳು ಕೂಡಲೇ ಸಂಬಂಧಿಸಿದ ಕಚೇರಿಗಳು ಹಾಗೂ ವಿಧಾನಸೌಧ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದು, ಸಮರ್ಪಕ ಕುಡಿವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಕೇಂದ್ರವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಬೇಕು. ತಾಲೂಕಿನಲ್ಲಿ ಪದವಿ ಪೂರ್ವ ಪದವಿ ಮಹಾವಿದ್ಯಾಲಯ, ವಸತಿ ನಿಲಯಗಳು, ಉಪನೋಂದಣಿ ಕಚೇರಿ, ಸರ್ಕಲ್ ಇನ್ಸ್‌ಪೆಕ್ಟರ್‌ ಕಚೇರಿ, ಅಗ್ನಿಶಾಮಕ ಕಚೇರಿ, ತಾಲೂಕು ಆಸ್ಪತ್ರೆ, ಮಿನಿ ವಿಧಾನಸೌಧ ಹಾಗೂ ಇನ್ನಿತರ ಕಚೇರಿಗಳು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸುವ ಮಾತನಾಡಿದ ಸಭಾಪತಿಗಳು, ಕೂಡಲೇ ನಿಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ತಾಲೂಕಿಗೆ ಅಗತ್ಯವಿರುವ ಕಚೇರಿ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

-------

ಫೋಟೊ: ವಡಗೇರಾ ತಾಲೂಕು ಕೇಂದ್ರದಲ್ಲಿ ಸರ್ಕಾರಿ ಕಚೇರಿಗಳ ಆರಂಭಕ್ಕೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರರಾದ ನಿಂಗಣ್ಣ ಜಡಿ ಮತ್ತು ಫಯಾಜ್ ಬಿ. ನಾಯ್ಕೋಡಿ ಅವರು ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದರು.20ವೈಡಿಆರ್5

.