ಬೆಳೆಹಾನಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

| Published : Apr 27 2025, 01:30 AM IST

ಸಾರಾಂಶ

ಹನೂರು ತಾಲೂಕಿನ ಕೆವಿಎಂ ದೊಡ್ಡಿ ಗ್ರಾಮದ ರೈತ ಗೋವಿಂದ ಜಮೀನಿನಲ್ಲಿ ಕಾಡುಪ್ರಾಣಿಗಳು ಮುಸುಕಿನ ಜೋಳದ ಫಸಲನ್ನು ತಿಂದು ಆನೆ ಮಾಡಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರು

ನಿರಂತರವಾಗಿ ಕಾಡು ಪ್ರಾಣಿಗಳು ಮುಸುಕಿನ ಜೋಳ ಫಸಲು ನಾಶ ಮಾಡುತ್ತಿದ್ದು, ಅರಣ್ಯ ಅಧಿಕಾರಿಗಳು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ರೈತ ಗೋವಿಂದ ಅವರಿಗೆ ಸೇರಿದ ಮುಸುಕಿನ ಜೋಳದ ಫಸಲನ್ನು ರಾತ್ರಿ ವೇಳೆ ಕಾಡುಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ತುಳಿದು, ತಿಂದು ಲಕ್ಷಾಂತರ ಬೆಳೆ ಹಾನಿಯಾಗಿರುವ ಬಗ್ಗೆ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ

ಅರಣ್ಯಾಧಿಕಾರಿಗಳ ವಿಫಲ ರೈತರ ಆಕ್ರೋಶ:

ಕಾವೇರಿ ವನ್ಯಧಾಮ ಹಾಗೂ ಹನೂರು ಬಫರ್ ಜೋನ್ ವಲಯದ ಅರಣ್ಯ ಪ್ರದೇಶದಿಂದ ರಾತ್ರಿ ವೇಳೆ ಕಾಡುಪ್ರಾಣಿಗಳು ರೈತರ ಜಮೀನುಗಳಿಗೆ ನುಗ್ಗಿ ಫಸಲನ್ನು ತಿಂದು ಲಕ್ಷಾಂತರ ರುಪಾಯಿ ಬೆಳೆ ಆನೆ ಉಂಟು ಮಾಡುತ್ತಿವೆ. ಹೀಗಾಗಿ ಅರಣ್ಯ ಅಧಿಕಾರಿಗಳು ಸಹ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ವಿಫಲರಾಗಿದ್ದಾರೆ. ಜೊತೆಗೆ ರೈತರಿಗೆ ಸಿಗಬೇಕಾದ ಸೂಕ್ತ ಪರಿಹಾರ ಸಹ ಸಕಾಲದಲ್ಲಿ ನೀಡದೆ ಸಂಕಷ್ಟದಲ್ಲಿರುವ ರೈತರಿಗೆ ಸಂಬಂಧಪಟ್ಟ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.ಹೆಚ್ಚಾದ ಕಾಡುಪ್ರಾಣಿಗಳ ಹಾವಳಿ:

ತಾಲೂಕಿನ ಬಸಪ್ಪನ ದೊಡ್ಡಿ ಗಂಗನದೊಡ್ಡಿ ಮತ್ತು ಜಿಆರ್ ನಗರ ದೊಮ್ಮನಗದ್ದೆ ಸೇರಿದಂತೆ ವಿವಿಧ ಗ್ರಾಮಗಳ ರೈತರ ಬಳಿ ಬರುವ ಉಡುತರೆ ಹಳ್ಳದ ಜಮೀನುಗಳ ಬಳಿಯೇ ಹಲವಾರು ತಿಂಗಳಿಂದ ಚಿರತೆ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದರೂ ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ವಿಫಲರಾಗಿದ್ದಾರೆ. ಮತ್ತೊಂದೆಡೆ ಮಲೆಮಾದೇಶ್ವರ ವನ್ಯಧಾಮದಿಂದ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಲಕ್ಷಾಂತರ ಬೆಳೆ ಹಾನಿ ಉಂಟು ಮಾಡುತ್ತಿದೆ. ಜೊತೆಗೆ ಕಾಡು ಹಂದಿಗಳು ಸಹ ಅರಣ್ಯ ಪ್ರದೇಶದಲ್ಲಿ ನೀರು ಆಹಾರ ಸಿಗದೇ ರೈತರ ಜಮೀನಿಗೆ ಬಂದು ಮುಷ್ಠಿನ ಜೋಳದ ಫಸಲನ್ನು ತಿಂದು ಹಾಳು ಮಾಡುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗನದೊಡ್ಡಿ, ಬಸಪ್ಪನ ದೊಡ್ಡಿ ಹಾಗೂ ಜಿಆರ್ ನಗರ ಸೇರಿದಂತೆ ಸುತ್ತಲಿನ ರೈತರ ಜಮೀನುಗಳ ಬಳಿಯೇ ರಾತ್ರಿ ಹಗಲು ಎನ್ನದೆ ಚಿರತೆ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ. ಮತ್ತೊಂದೆಡೆ ಕಾಡಾನೆಗಳ ಹಾವಳಿ ಸಹ ವಿಪರೀತ ಬೆಳೆಯನ್ನು ಹಾನಿ ಮಾಡುತ್ತಿವೆ. ಕಾಡು ಹಂದಿಗಳು ಸಹ ಹಿಂಡು ಹಿಂಡಾಗಿ ಬಂದು ರೈತರ ಜಮೀನುಗಳಲ್ಲಿ ಫಸಲನ್ನು ತಿಂದು ಹಾಳು ಮಾಡುತ್ತಿವೆ. ಅರಣ್ಯದಂಚಿನಲ್ಲಿ ರೈಲ್ವೆ ಬ್ಯಾರಿಗೇಟ್ ಮತ್ತು ಆನೆ ಕಂದಕ ನಿರ್ಮಿಸಿ ಪ್ರಾಣಿಗಳು ಬರದಂತೆ ತಡೆಗಟ್ಟಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಶ್ರೀನಿವಾಸ್, ರಾಜ್ಯ ರೈತ ಸಂಘ