ಸಾರಾಂಶ
ಚಿಕ್ಕಮಗಳೂರುದಲಿತರ ಮೇಲಿನ ದೌರ್ಜನ್ಯ ತಡೆ ಸಮಿತಿಗೆ ದಲಿತಪರ ಸಂಘಟನೆಯಲ್ಲಿ ಸೇವೆ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಶನಿವಾರ ಶಿರಸ್ತೇದಾರ್ ಮನು ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ದಸಂಸದಿಂದ ಶಿರಸ್ತೇದಾರ್ ಮನುಗೆ ಮನವಿ ಸಲ್ಲಿಕೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದಲಿತರ ಮೇಲಿನ ದೌರ್ಜನ್ಯ ತಡೆ ಸಮಿತಿಗೆ ದಲಿತಪರ ಸಂಘಟನೆಯಲ್ಲಿ ಸೇವೆ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಶನಿವಾರ ಶಿರಸ್ತೇದಾರ್ ಮನು ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಬಳಿಕ ಮಾತನಾಡಿದ ದಸಂಸ ರಾಜ್ಯ ಸಮಿತಿ ಸದಸ್ಯ ಕೆ.ಸಿ.ವಸಂತ್‍ಕುಮಾರ್ , ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯುವ ಮತ್ತು ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ತರಲಾಗಿದೆ. ಈ ಸಮಿತಿಗೆ ದಲಿತ ಪರ ಸಂಘಟನೆಗಳ ಮುಖಂಡರನ್ನು ಸದಸ್ಯರಾಗಿ ನೇಮಕ ಮಾಡಲಾಗುತ್ತಿತ್ತು ಎಂದರು.ಕಳೆದ ಐದು ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷದವರು ನೇಮಕ ಪಟ್ಟಿ ತಯಾರಿಸುತ್ತಿದ್ದರು. ಈ ರೀತಿ ಆಗುವುದರಿಂದ ದಲಿತರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದಂತಾಗಿದೆ ಎಂದು ತಿಳಿಸಿದರು.
ಜನಸಂಪರ್ಕ ಇಲ್ಲದ ವ್ಯಕ್ತಿಗಳು ಸಮಿತಿ ಸದಸ್ಯರಾದರೆ ಈ ಕಾಯ್ದೆಯ ಅನುಷ್ಟಾನದಲ್ಲಿ ನಿರೀಕ್ಷಿತ ಮಟ್ಟದಲ್ಲಿ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗುವುದಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಸ್ವೀಕರಿಸಿರುವ ವ್ಯಕ್ತಿಗಳಲ್ಲಿ ದಲಿತಪರ ಸಂಘಟನೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಅವಕಾಶ ಕಲ್ಪಿಸಿ ರಾಜಕೀಯೇತರ ಸಮಿತಿಯನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ.ಪಿ.ಜಯರಾಮಯ್ಯ, ಕೆಂಚಪ್ಪ, ವಿ.ಧರ್ಮೇಶ್, ತಾಲೂಕು ಸಂಚಾಲಕರಾದ ವಿನುತ್, ಅಣ್ಣಯ್ಯ, ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಹೊನ್ನೇಶ್, ಹುಣಸೇಮಕ್ಕಿ ಲಕ್ಷ್ಮಣ್, ಟಿ.ಎಲ್.ಗಣೇಶ್, ಹರೀಶ್‍ಮಿತ್ರ, ಜಗದೀಶ್ ಕೋಟೆ, ರಮೇಶ್ ಇದ್ದರು.
29 ಕೆಸಿಕೆಎಂ 3ದಲಿತರ ಮೇಲಿನ ದೌರ್ಜನ್ಯ ತಡೆ ಸಮಿತಿಗೆ ದಲಿತಪರ ಸಂಘಟನೆಯಲ್ಲಿ ಸೇವೆ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಶನಿವಾರ ಶಿರಸ್ತೇದಾರ್ ಮನು ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.