ದೊಡ್ಡಬಳ್ಳಾಪುರ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ, ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳದ ಕಾರ್ಯಕರ್ತರು ಇಲ್ಲಿನ ರುಮಾಲೆ ಭದ್ರಣ್ಣ ವೃತ್ತದಿಂದ ಟಿ.ಸಿದ್ದಲಿಂಗಯ್ಯ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು.
ದೊಡ್ಡಬಳ್ಳಾಪುರ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ, ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳದ ಕಾರ್ಯಕರ್ತರು ಇಲ್ಲಿನ ರುಮಾಲೆ ಭದ್ರಣ್ಣ ವೃತ್ತದಿಂದ ಟಿ.ಸಿದ್ದಲಿಂಗಯ್ಯ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು.
ಬಾಂಗ್ಲಾದೇಶದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಮೈಮೆನ್ಸಿಂಗ್‌ನಲ್ಲಿ ಹತ್ಯೆಯಾದ ದೀಪು ಚಂದ್ರದಾಸ್ ಗೆ ಶ್ರದ್ಧಾಂಜಲಿ ಸಲ್ಲಿಸಿದರು.ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ. ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯಕ್ಕೆ ಇಳಿದಿರುವುದರ ಹಿಂದೆ ಪಟ್ಟಭದ್ರಹಿತಾಸಕ್ತಿಗಳ ಕೈವಾಡ ಸ್ಪಷ್ಟವಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ನಿಗ್ರಹಿಸುವಲ್ಲಿ ಅಲ್ಲಿನ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ ಮಾತನಾಡಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಂತಿ, ಸೌಹಾರ್ದತೆ ನೆಲೆಸಲು ವಿಶ್ವಸಂಸ್ಥೆಗೆ ಪತ್ರ ಬರೆಯಬೇಕು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸೆ, ದೌರ್ಜನ್ಯ ಖಂಡನೀಯ. ಹಿಂದೂ ಸಮಾಜ ಜಾಗೃತರಾಗಿ ಸಂಘಟಿತರಾಗಬೇಕು ಎಂದರು.ಕೋಲಾರ ವಿಭಾಗ ಬಜರಂಗದಳ ಸಂಯೋಜಕ ನರೇಶ್ ಮಾತನಾಡಿ, ಬಾಂಗ್ಲಾ ಮತ್ತು ಪಾಕಿಸ್ತಾನಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಹಿಂದು ಮಹಿಳೆಯರ ಮೇಲೆ ಅತ್ಯಾಚಾರ, ಮತಾಂತರ, ಬಲವಂತದ ಮದುವೆ, ಹಲ್ಲೆ, ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಕೇಂದ್ರ ಸರ್ಕಾರ ಸಂಬಂಧಿಸಿದ ದೇಶಗಳ ಮುಖ್ಯಸ್ಥರ ಜತೆ ಚರ್ಚಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಾಂಗ್ಲಾದೇಶ ಮುಸ್ಲಿಮರು ಬಂದು ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಜಿಲ್ಲಾ ಅಡಳಿತ ಮತ್ತು ಪೊಲೀಸ್ ಇಲಾಖೆ ಗುರುತಿಸಿ, ಓಡಿಸಬೇಕು ಎಂದು ತಿಳಿಸಿದರು.
ವಿಶ್ವ ಹಿಂದೂ ಪರಿಷದ್, ಬಜರಂಗದಳ ಪದಾಧಿಕಾರಿಗಳಾದ ಶ್ರೀ ಕಾಂತ್, ರಮೇಶ್, ಅಗ್ನಿ ವೆಂಕಟೇಶ ಉಮೇಶ್, ವೆಂಕಟೇಶ, ಪುನೀತ್, ಮಧು , ಸೋಮು, ಕಿರಣ್, ಬಲರಾಮ್,ಮುನಿಕೃಷ್ಣ, ಮಹೇಶ್ ಬಾಬು, ರಾಹುಲ್ ಸೇರಿದಂತೆ ಕಾರ್ಯಕರ್ತರು ಇದ್ದರು.28ಕೆಡಿಬಿಪಿ2- ದೊಡ್ಡಬಳ್ಳಾಪುರ ನಗರದಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು ಪಂಜಿನ ಮೆರವಣಿಗೆ ಮಾಡುವ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದು ನರಮೇಧವನ್ನು ಖಂಡಿಸಿದರು.