ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವೆಗೆ ಆಗ್ರಹ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ

| Published : Aug 08 2024, 01:43 AM IST / Updated: Aug 08 2024, 11:40 AM IST

ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವೆಗೆ ಆಗ್ರಹ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

  ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಬೇಕೆಂದು ಸಂಸದ ಜಗದೀಶ ಶೆಟ್ಟರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು.

 ಬೆಳಗಾವಿ :  ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಬೇಕೆಂದು ಸಂಸದ ಜಗದೀಶ ಶೆಟ್ಟರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು.

ಬುಧವಾರ ನವದೆಹಲಿಯ ಸಚಿವ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಪ್ರತಿವರ್ಷ ದೇಶದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿಗೆ ಬರಲು ರಸ್ತೆ ಸಂಪರ್ಕ ಮಾತ್ರ ಇದ್ದು, ರಸ್ತೆ ಉದ್ದಕ್ಕೂ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿ ಹಲವು ಗಂಟೆಗಳ ಕಾಲ ಭಕ್ತರು ಪರದಾಡುವಂತಾಗುತ್ತದೆ. 

ಈ ನಿಟ್ಟಿನಲ್ಲಿ ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಅವಶ್ಯಕವಾಗಿದ್ದು, ಈ ಕುರಿತು ನೂತನವಾಗಿ ನಿರ್ಮಾಣ ಮಾಡಬೇಕಾದ ರೈಲ್ವೆ ಮಾರ್ಗದ ಸರ್ವೆ ಕಾರ್ಯ ನಡೆಸಲು ಹುಬ್ಬಳ್ಳಿ ನೈರುತ್ಯ ವಲಯ ರೈಲ್ವೆ ಮಹಾಪ್ರಬಂಧಕರಿಗೆ ನಿರ್ದೇಶನ ನೀಡಬೇಕು ಎಂದು ವಿನಂತಿಸಿದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇದ್ದರು