ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಆಗ್ರಹ

| Published : Dec 14 2024, 12:47 AM IST

ಸಾರಾಂಶ

ರಾಜ್ಯದಲ್ಲಿ ಖಾಲಿ ಇರುವ 2650 ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್‌ -2 ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು, ನೇಮಕಾತಿಯಲ್ಲಿ ವಯೋಮಿತಿ ಮೀರುವ ಹಂತದಲ್ಲಿರುವವರಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿರುದ್ಯೋಗಿ ಪ್ರಾಥಮಿಕ ಶಾಲಾ ಗ್ರೇಡ್‌ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೇತೃತ್ವದಲ್ಲಿ ದೈಹಿಕ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಪ್ರತಿಭಟನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

18 ವರ್ಷಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ನಡೆಯದ್ದರಿಂದ ಹಲವು ಪದವೀಧರರು ವಯೋಮಿತಿ ಮೀರುತ್ತಿದೆ. ನೇಮಕಾತಿ ವೇಳೆ ನಿರುದ್ಯೋಗಿ ದೈಹಿಕ ಶಿಕ್ಷಕರಿಗೆ ಆದ್ಯತೆ ನೀಡಬೇಕು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್‌-2 ಹುದ್ದೆಗಳನ್ನು ವಯೋಮಿತಿ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಕಾಂಗ್ರೆಸ್ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ದೈಹಿಕ, ಸಂಗೀತ, ಕಲಾ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ರಾಜ್ಯಾಧ್ಯಕ್ಷ ಮಧು ಎಸ್‌.ಸಿ., ಉಪಾಧ್ಯಕ್ಷ ದಯಾನಂದ ಕೆ., ಗೌರವಾಧ್ಯಕ್ಷ ಬಾಬು. ಕಾರ್ಯದರ್ಶಿ, ಮಹಿಬೂಬ್‌ ಇತರರು ಇದ್ದರು.