ಸಾರಾಂಶ
ಕಳೆದ ವರ್ಷ ಸರಿಯಾಗಿ ಮಳೆಯಾಗಿಲ್ಲ, ರೈತರಿಗೆ ಮೇವು ಸಂಗ್ರಹ ಇಲ್ಲದೇ ಜಾನುವಾರು ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಬರಗಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಯದೇ ಕೃಷಿ ಕಾರ್ಮಿಕರು ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ.
ಧಾರವಾಡ:
ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರವನ್ನು ಎಲ್ಲ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.ರಾಜ್ಯದ 223 ತಾಲೂಕಿನಲ್ಲಿ ಬರದಿಂದ ಜಾನುವಾರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಿ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಳೆದ ವರ್ಷ ಸರಿಯಾಗಿ ಮಳೆಯಾಗಿಲ್ಲ, ರೈತರಿಗೆ ಮೇವು ಸಂಗ್ರಹ ಇಲ್ಲದೇ ಜಾನುವಾರು ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಬರಗಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಯದೇ ಕೃಷಿ ಕಾರ್ಮಿಕರು ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ರೈತರಿಗೆ ಸಾಲ ಸೌಲಭ್ಯ ನೀಡಿ ಈಗ ಕಿರಿಕಿರಿ ಉಂಟು ಮಾಡುತ್ತಿದೆ. ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಾಲಮನ್ನಾ ಮಾಡಬೇಕು ಹಾಗೂ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಆಗ್ರಹಿಸಿದರು.