ಸಾರಾಂಶ
ಕನಕಪುರ: ರಾಜ್ಯ ಸರ್ಕಾರ ರೈತರಿಗೆ ಕಳೆದ ಹತ್ತು ತಿಂಗಳುಗಳಿಂದ ಹಾಲಿನ 5 ರು. ಸಹಾಯಧನವನ್ನು ಬಿಡುಗಡೆ ಮಾಡಲು ತಾರತಮ್ಯ ಮಾಡುತ್ತಿದ್ದು ಈ ಕೂಡಲೇ ಹಣ ಬಿಡುಗಡೆ ಮಾಡುವಂತೆ ರೈತ ಸಂಘದ ತಾಲೂಕು ಪದಾಧಿಕಾರಿಗಳು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಾಡಹಳ್ಳಿ ಅನುಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ರೈತರಿಗೆ ಯಾವುದೇ ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಪ್ರತಿ ಲೀಟರ್ ಹಾಲಿಗೆ ನೀಡುತ್ತಿದ್ದ 5 ರು. ಸಹಾಯಧನ ನಿಲ್ಲಿಸಿದ್ದಲ್ಲದೆ ಬಿಜೆಪಿ ಸರ್ಕಾರ ನೀಡುತ್ತಿದ್ದ 4000 ರುಪಾಯಿಗಳನ್ನು ಹಿಂದಕ್ಕೆ ಪಡೆದಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಜನರಿಗೆ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ಸುಮ್ಮನಾಗಿದ್ದು, ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಸದೆ ಕಾಲಹರಣ ಮಾಡುತ್ತಾ ರಾಜ್ಯದ ರೈತರು, ಜನ ಸಾಮಾನ್ಯರಿಗೆ ಮಂಕುಬೂದಿ ಎರಚುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಸರ್ಕಾರ ರೈತರ ಮನವಿಯನ್ನು ಕಡೆಗಣಿಸದಿದ್ದರೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರದಿಂದಲೇ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ರೈತ ಸಂಘದ ತಾಲೂಕು ಅದ್ಯಕ್ಷ ಶಿವಗೂಳಿಗೌಡ, ರೈತ ಮುಖಂಡರಾದ ಕೃಷ್ಣಪ್ಪ, ಅಂತೋನಿ, ರಾಘವೇಂದ್ರ, ಮಂಜುನಾಥ್, ಸತೀಶ್, ಚಿಕ್ಕಣ್ಣ, ಪುಟ್ಟಸ್ವಾಮಿ, ರಾಮಣ್ಣ ಮಹದೇವಣ್ಣ, ಸ್ವಾಮಿಗೌಡ, ಹಲಗೂರು ವೆಂಕಟೇಶ್, ನಿಂಗರಾಜು, ಪುಟ್ಟರಂಗಣ್ಣ, ಚನ್ನಪ್ಪ, ಯುವ ಮುಖಂಡ ನವೀನ್ ಸೇರಿದಂತೆ ರೈತ ಸಂಘದ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಕೆ ಕೆ ಪಿ ಸುದ್ದಿ 03:ಕನಕಪುರ ತಾಲೂಕು ರೈತ ಸಂಘದ ಪದಾಧಿಕಾರಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.