ಕನ್ನಡಪ್ರಭ ವಾರ್ತೆ ರಾಮದುರ್ಗರಾಜ್ಯದ ಸರ್ಕಾರಿ ಹಿರಿಯ, ಕಿರಿಯ ಹಾಗೂ ಪ್ರೌಢಶಾಲೆಗಲಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಬಿಸಿಯೂಟ ತಯಾರಿಸುತ್ತಿರುವ ಕಾರ್ಯಕರ್ತರಿಗೆ ಸರ್ಕಾರ ಕಳೆದ 3 ತಿಂಗಳಿಂದ ಸರ್ಕಾರ ವೇತನ ನೀಡಿಲ್ಲ. ಬಾಕಿ ವೇತನ ಶೀಘ್ರ ಬಿಡುಗಡೆಗೊಳಿಸುವಂತೆ ಕಾರ್ಮಿಕ ಮುಖಂಡ ಗೈಬು ಜೈನೆಖಾನ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಜ್ಯದ ಸರ್ಕಾರಿ ಹಿರಿಯ, ಕಿರಿಯ ಹಾಗೂ ಪ್ರೌಢಶಾಲೆಗಲಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಬಿಸಿಯೂಟ ತಯಾರಿಸುತ್ತಿರುವ ಕಾರ್ಯಕರ್ತರಿಗೆ ಸರ್ಕಾರ ಕಳೆದ 3 ತಿಂಗಳಿಂದ ಸರ್ಕಾರ ವೇತನ ನೀಡಿಲ್ಲ. ಬಾಕಿ ವೇತನ ಶೀಘ್ರ ಬಿಡುಗಡೆಗೊಳಿಸುವಂತೆ ಕಾರ್ಮಿಕ ಮುಖಂಡ ಗೈಬು ಜೈನೆಖಾನ ಒತ್ತಾಯಿಸಿದರು.ಶುಕ್ರವಾರ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು) ತಾಪಂ ಇಒಗೆ ಮನವಿ ಸಲ್ಲಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಕ್ಷರ ದಾಸೋಹ ಕಾರ್ಯಕರ್ತರು ಕೇವಲ ₹4600 ಗೌರವಧನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಡ ಮಹಿಳೆಯರು ಕುಟುಂಬ ಸಾಗಿಸುವುದೇ ಕಷ್ಟವಾಗಿದೆ.
ಅದರಲ್ಲಿ ಸರಿಯಾಗಿ ಪ್ರತಿ ತಿಂಗಳ ವೇತನ ದೊರೆಯದಿದ್ದರೆ ಜೀವನ ಸಾಗಿಸುವುದು ತೊಂದರೆಯಾಗುತ್ತದೆ. ಕಾರಣ ಆದಷ್ಟು ಬೇಗನೆ ಬಾಕಿ ಉಳಿಸಿಕೊಂಡ 3 ತಿಂಗಳ ವೇತನ ಬಿಡುಗಡೆ ಮಾಡಬೇಕು ಮತ್ತು ಪ್ರತಿ ತಿಂಗಳು ವೇತನ ನೀಡಲು ಸರ್ಕಾರ ಕ್ರಮ ಕೈಗೊಳ್ಳಲು ಆಗ್ರಹಿಸಿದರು.ಕಟ್ಟಡ ಕಾರ್ಮಿಕರ ಸಂಘದ ಮುಖಂಡ ನಾಗಪ್ಪ ಸಂಗೊಳ್ಳಿ, ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಅಧ್ಯಕ್ಷೆ ತುಳಸಮ್ಮ ಮಾಳದಕರ, ಕಾರ್ಯದರ್ಶಿ ರಾಚವ್ವ ರಾಮದುರ್ಗ, ಮಾಲಾ ಈಳಿಗೇರ ಮುಂತಾದವರು ಪ್ರತಿಭಟನಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.