ಸಾರಾಂಶ
ನಗರದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ವಿಶಾಲವಾದ ರಸ್ತೆ ಹಾಗೂ ಫುಟ್‍ಪಾತ್ ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭಾಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಗಮನ ಸೆಳೆದು ಚಿತ್ರದುರ್ಗದಲ್ಲಿ ಡಿವೈಡರ್ ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡುವಂತೆ ಮನವಿ ಮಾಡಿರುವುದು ಸ್ವಾಗತಾರ್ಹವೆಂದರು.
ವಿಶಾಲ ರಸ್ತೆ, ಪುಟ್ ಪಾತ್ ನಿರ್ಮಿಸಲು ಮನವಿಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ವಿಶಾಲವಾದ ರಸ್ತೆ ಹಾಗೂ ಫುಟ್‍ಪಾತ್ ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭಾಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಗಮನ ಸೆಳೆದು ಚಿತ್ರದುರ್ಗದಲ್ಲಿ ಡಿವೈಡರ್ ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡುವಂತೆ ಮನವಿ ಮಾಡಿರುವುದು ಸ್ವಾಗತಾರ್ಹವೆಂದರು.
ಚಳ್ಳಕೆರೆ ಟೋಲ್‍ಗೇಟ್‍ನಿಂದ ಪ್ರವಾಸಿ ಮಂದಿರದವರೆಗೆ ಮಾರ್ಕ್‍ಗೆ ಅನುಗುಣವಾಗಿ ರಸ್ತೆ ಅಗಲೀಕರಣವಾಗಿಲ್ಲ. ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ಮೆದೇಹಳ್ಳಿ ರಸ್ತೆ ಹಾಗೂ ಜೆಸಿಆರ್. ಜೋಗಿಮಟ್ಟಿ ರಸ್ತೆ ಕೂಡ ಗುರುತು ಮಾಡಿದಷ್ಟು ಅಗಲೀಕರಣವಾಗಿಲ್ಲ. ಎರಡು ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದ್ದರೂ ರಸ್ತೆ ಅಗಲೀಕರಣದಲ್ಲಿ ಆಗಿರುವ ತಾರತಮ್ಯ ಮಾತ್ರ ನಿವಾರಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಎಸ್‌ಬಿಎಂ ಸರ್ಕಲ್‍ನಲ್ಲಿ ಅವೈಜ್ಞಾನಿಕ ಸಿಗ್ನಲ್ ಅಳವಡಿಸಿರುವುದರಿಂದ ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ದಾಟುವುದು ಕಷ್ಟವಾಗಿದೆ. ತುರುವನೂರು ರಸ್ತೆಯಲ್ಲಿ ಬೈಕ್, ಕಾರ್ ಶೋರೂಂನವರು ರಸ್ತೆ ಅತಿಕ್ರಮಣ ಮಾಡಿಕೊಂಡು ವಾಹನಗಳನ್ನು ನಿಲ್ಲಿಸುವುದರಿಂದ ಓಡಾಟಕ್ಕೆ ಅಡಚಣೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು ರಸ್ತೆ, ಫುಟ್‍ಪಾತ್‍ಗಳನ್ನು ನುಂಗಿ ನೀರು ಕುಡಿದಿದ್ದಾರೆಂದು ಕೆ.ಟಿ.ಶಿವಕುಮಾರ್ ಆಪಾದಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್ ಸಿ. ಸುರೇಶ್, ಅಖಿಲೇಶ್, ಮಹಮದ್ ರಫಿ, ಶಾನ್, ಅವಿನಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.----------------